ಗುರುವಾರ , ಜೂನ್ 30, 2022
25 °C

ಜಾನುವಾರು ಸಾಗಣೆ: ಕಠಿಣ ಕ್ರಮ ಇಲ್ಲ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೆಂಗಳೂರು: ಜಾನುವಾರು ಸಾಗಣೆದಾರರ ವಿರುದ್ಧ ಕರ್ನಾಟಕ ಜಾನುವಾರು ಸಂರಕ್ಷಣೆ ಕಾಯ್ದೆ –2020ರ ಅಡಿಯಲ್ಲಿ ಕಠಿಣ ಕ್ರಮಗಳನ್ನು ಕೈಗೊಂಡಿಲ್ಲ ಎಂದು ಹೈಕೋರ್ಟ್‌ಗೆ ರಾಜ್ಯ ಸರ್ಕಾರ ಮಾಹಿತಿ ನೀಡಿದೆ.

ಕಾಯ್ದೆ ಪ್ರಶ್ನಿಸಿ ಸಲ್ಲಿಕೆಯಾಗಿರುವ ಅರ್ಜಿಗಳ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಎ.ಎಸ್. ಓಕಾ ನೇತೃತ್ವದ ವಿಭಾಗೀಯ ಪೀಠ, ಅಂತಿಮ ವಿಚಾರಣೆಯ ದಿನಾಂಕವನ್ನು ಸೋಮವಾರಕ್ಕೆ ನಿಗದಿ ಮಾಡಿತು.

‘ಹೊಸ ಕಾಯ್ದೆಯ ನಿಬಂಧನೆಗಳ ಅಡಿಯಲ್ಲಿ 29 ಪ್ರಕರಣಗಳನ್ನು ದಾಖಲಿಸಲಾಗಿದೆ. ಜಾನುವಾರು ವಧೆ ಸಂಬಂಧ ಸೆಕ್ಷನ್ 6ರ ಅಡಿಯಲ್ಲಿ 18 ಪ್ರಕರಣಗಳನ್ನು ದಾಖಲಿಸಲಾಗಿದೆ. ಸಾಗಣೆ ಸಂಬಂಧ ಸೆಕ್ಷನ್ 5ರ ಅಡಿಯಲ್ಲಿ 11 ಪ್ರಕರಣ ದಾಖಲಿಸಲಾಗಿದೆ. ನಿರ್ದೇಶನಗಳ ಕುರಿತು ಸಂವಹನ ಕೊರತೆಯಿಂದ ಸೆಕ್ಷನ್ 5ರ ಅಡಿಯಲ್ಲಿ ಕೆಲ ಪ್ರಕರಣ ದಾಖಲಾಗಿದ್ದು, ಈ ಸೆಕ್ಷನ್ ಅಡಿಯಲ್ಲಿ ಎಫ್‌ಐಆರ್ ದಾಖಲಿಸದಂತೆ ಸುತ್ತೋಲೆ ಹೊರಡಿಸಲಾಗುವುದು’ ಎಂದು  ಅಡ್ವೊಕೇಟ್ ಜನರಲ್ ವಿವರಿಸಿದರು. 

ಗುಜರಾತ್‌ನಲ್ಲಿ ಜಾರಿಗೆ ತಂದ ಪ್ರಾಣಿ ಸಂರಕ್ಷಣಾ ಕಾಯ್ದೆ ಪ್ರಶ್ನಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್‌ನ 7 ಸದಸ್ಯರ ಸಂವಿಧಾನ ಪೀಠ ತಿರಸ್ಕರಿಸಿತ್ತು. ಮಹಾರಾಷ್ಟ್ರದ ಪ್ರಾಣಿ ಸಂರಕ್ಷಣಾ ಕಾಯ್ದೆಯ ತಿದ್ದುಪಡಿಗಳನ್ನು ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿಯನ್ನು ಅಲ್ಲಿನ ಹೈಕೋರ್ಟ್‌ 2016ರಲ್ಲಿ ತಿರಸ್ಕರಿಸಿತ್ತು ಎಂಬುದನ್ನು ಸರ್ಕಾರ ತನ್ನ ಆಕ್ಷೇಪಣೆಯಲ್ಲಿ ಉಲ್ಲೇಖಿಸಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು