ಸೋಮವಾರ, ಜೂನ್ 14, 2021
27 °C

ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರನ್ನು ಭೇಟಿಯಾದ ಸಿ.ಪಿ. ಯೋಗೇಶ್ವರ್‌

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ರಾಮನಗರ: ವಿಧಾನ ಪರಿಷತ್‌ ಸದಸ್ಯರಾದ ಬೆನ್ನಲ್ಲೇ ಸಿ.ಪಿ. ಯೋಗೇಶ್ವರ್‍ ದೆಹಲಿಯತ್ತ ಮುಖ ಮಾಡಿದ್ದು, ಸೋಮವಾರ ಜಲಸಂಪನ್ಮೂಲ ಸಚಿವ ರಮೇಶ್‌ ಜಾರಕಿಹೊಳಿ ಅವರೊಂದಿಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಅವರನ್ನು ಭೇಟಿ ಮಾಡಿದ್ದಾರೆ.

ರಾಜ್ಯದಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದ ಆರಂಭದಿಂದಲೂ ಯೋಗೇಶ್ವರ್‌ ಸಚಿವ ಸ್ಥಾನದ ಆಕಾಂಕ್ಷಿ ಆಗಿದ್ದಾರೆ. ಹೀಗಾಗಿ ಈ ಬಾರಿ ಮಂತ್ರಿಗಿರಿಗಾಗಿ ಪಕ್ಷದ ಅಧ್ಯಕ್ಷರಿಗೆ ಬೇಡಿಕೆ ಸಲ್ಲಿಸಲೆಂದೇ ದೆಹಲಿಗೆ ತೆರಳಿದ್ದಾರೆ ಎನ್ನಲಾಗಿದೆ. ಇದರೊಟ್ಟಿಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್‌ರ ರಾಜಕೀಯ ವೈರಿ ರಮೇಶ್‌ ಸಹ ಜೊತೆಗೂಡಿರುವುದು ಹಲವು ಕುತೂಹಲಗಳಿಗೆ ಕಾರಣವಾಗಿದೆ. ಡಿ.ಕೆ. ಸಹೋದರರ ವಿರುದ್ಧದ ಕೆಲವು ಸಾಕ್ಷ್ಯಗಳನ್ನೂ ಅವರೂ ಕೊಂಡೊಯ್ದಿದ್ದಾರೆ ಎಂದು ಸುದ್ದಿ ಹಬ್ಬಿದೆ. ಈ ಕುರಿತು ಪ್ರತಿಕ್ರಿಯೆಗೆ ಯೋಗೇಶ್ವರ್‌ ದೂರವಾಣಿ ಸಂಪರ್ಕಕ್ಕೆ ಲಭ್ಯ ಆಗಲಿಲ್ಲ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು