ಸೋಮವಾರ, ಮೇ 16, 2022
30 °C

ಸಿದ್ಧಾರ್ಥ್‌ ಕೊಲೆ ಪ್ರಕರಣ: ಮಲತಾಯಿ ಬಂಧನ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಮಾಜಿ ಮುಖ್ಯಮಂತ್ರಿ ದಿವಂಗತ ಧರಂಸಿಂಗ್ ಅವರ ಸಂಬಂಧಿ ಸಿದ್ದಾರ್ಥ್ ದೇವೇಂದರ್ ಸಿಂಗ್ ಎಂಬುವರ ಹತ್ಯೆ ಪ್ರಕರಣದಲ್ಲಿ ಸಿದ್ಧಾರ್ಥ್‌ ಅವರ ಮಲತಾಯಿಯನ್ನು ಅಮೃತಹಳ್ಳಿ  ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಸಿದ್ಧಾರ್ಥ್ ಅವರ ತಂದೆ ದೇವೇಂದರ್‌ ಸಿಂಗ್ ಅವರಿಗೆ ಇಬ್ಬರು ಹೆಂಡತಿಯರಿದ್ದು, ಈಕೆ ಎರಡನೇ ಹೆಂಡತಿ. ಆಸ್ತಿ ವಿಚಾರವಾಗಿ ಸಿದ್ಧಾರ್ಥ್  ಕೊಲೆಗೆ ಈಕೆಯೇ ಸುಪಾರಿ ನೀಡಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.

ಸುಪಾರಿ ಪಡೆದಿದ್ದವರು ಸಿದ್ಧಾರ್ಥ್‌ ಅವರನ್ನು ಉಸಿರುಗಟ್ಟಿಸಿ ಕೊಲೆ ಮಾಡಿದ್ದರು. ಆಸ್ತಿ ವಿಚಾರಕ್ಕೆ ಕೊಲೆಗೆ ಸುಪಾರಿ ನೀಡಿದ್ದಾಗಿ ಆರೋಪಿ ಮಹಿಳೆ ತಪ್ಪೊಪ್ಪಿಕೊಂಡಿರುವುದಾಗಿ ಮೂಲಗಳು ತಿಳಿಸಿದ್ದು, ಬಂಧಿತರ ಕುರಿತು ಹೆಚ್ಚಿನ ಮಾಹಿತಿ ನೀಡಲು ಪೊಲೀಸ್ ಅಧಿಕಾರಿಗಳು ನಿರಾಕರಿಸಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು