ಸೋಮವಾರ, ಮಾರ್ಚ್ 27, 2023
29 °C

ಆರ್‌.ಆರ್‌. ನಗರ: ₹ 22.50 ಲಕ್ಷ ಮೌಲ್ಯದ ಚಿನ್ನಾಭರಣ ಜಪ್ತಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೆಂಗಳೂರು: ನಗರದ ಹಲವು ಮನೆಗಳಲ್ಲಿ ಕಳ್ಳತನ ಮಾಡಿದ್ದ ಆರೋಪದಡಿ ಮೂವರನ್ನು ರಾಜರಾಜೇಶ್ವರಿನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ.

‘ಕಾಂತರಾಜು, ಮಂಜುನಾಥ್ ಹಾಗೂ ಭರತ್ ಬಂಧಿತರು. ಅವರಿಂದ ₹ 22.50 ಲಕ್ಷ ಮೌಲ್ಯದ ಚಿನ್ನಾಭರಣ, ಬೆಳ್ಳಿ ಸಾಮಗ್ರಿ, ಮೊಬೈಲ್ ಹಾಗೂ ₹ 92 ಸಾವಿರ ನಗದು ಜಪ್ತಿ ಮಾಡಲಾಗಿದೆ’ ಎಂದು ಪೊಲೀಸರು ಹೇಳಿದರು.

‘ರಂಗೋಲಿ ಹಾಕಿರದ ಹಾಗೂ ಅಂಗಳದಲ್ಲಿ ಕಸ ಬಿದ್ದಿರುತ್ತಿದ್ದ ಮನೆಗಳನ್ನು ಆರೋಪಿಗಳು ಗುರುತಿಸುತ್ತಿದ್ದರು. ರಾತ್ರಿ ಸಮಯದಲ್ಲಿ ಬಾಗಿಲು ಮೀಟಿ ಮನೆಯೊಳಗೆ ನುಗ್ಗುತ್ತಿದ್ದ ಆರೋಪಿಗಳು, ಚಿನ್ನಾಭರಣ ಹಾಗೂ ನಗದು ಕದ್ದುಕೊಂಡು ಪರಾರಿಯಾಗುತ್ತಿದ್ದರು’ ಎಂದೂ ತಿಳಿಸಿದರು.

‘ಠಾಣೆ ವ್ಯಾಪ್ತಿಯ ಮನೆಯೊಂದರ ನಿವಾಸಿಯೊಬ್ಬರು ಕೋವಿಡ್‌ನಿಂದ ಮೃತಪಟ್ಟಿದ್ದರು. ಅವರ ಕುಟುಂಬದವರು, ಮನೆ ಬಿಟ್ಟು ಬೇರೆಡೆ ನೆಲೆಸಿದ್ದರು. ಅದೇ ಮನೆಯಲ್ಲಿ ಇತ್ತೀಚೆಗೆ ಕಳ್ಳತನವಾಗಿತ್ತು. ಆರೋಪಿಗಳಿಗಾಗಿ ಶೋಧ ನಡೆಸಲಾಗುತ್ತಿತ್ತು. ಕೆಲ ಪುರಾವೆಗಳ ಆಧಾರದಲ್ಲಿ ಆರೋಪಿಗಳನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ ತಪ್ಪೊಪ್ಪಿಕೊಂಡರು’ ಎಂದೂ ಹೇಳಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು