ಬುಧವಾರ, ಏಪ್ರಿಲ್ 21, 2021
33 °C

ಪಬ್‌ಜಿ ವ್ಯಸನ: ಆಟದ ವಿಚಾರಕ್ಕೆ ಜಗಳ; ಕಲ್ಲಿನಿಂದ ತಲೆ ಜಜ್ಜಿ ಬಾಲಕನ ಕೊಲೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಉಳ್ಳಾಲ: ನಾಪತ್ತೆಯಾಗಿದ್ದ 13 ವರ್ಷದ ಬಾಲಕನ ತಲೆಯನ್ನು ಕಲ್ಲಿನಿಂದ ಜಜ್ಜಿ ಕೊಲೆ ಮಾಡಲಾಗಿದ್ದು, ಮೃತದೇಹವು ಉಳ್ಳಾಲ ಠಾಣಾ ವ್ಯಾಪ್ತಿಯ ಕೆ.ಸಿ ರೋಡು ಬಳಿ ಭಾನುವಾರ ಬೆಳಿಗ್ಗೆ ಪತ್ತೆಯಾಗಿದೆ.

ಇದನ್ನೂ ಓದಿ: ಉಳ್ಳಾಲದಲ್ಲಿ ಬಾಲಕನ ಕೊಲೆ ಪ್ರಕರಣ: ಪಬ್‌ಜಿ ಜತೆಗಾರ ಪೊಲೀಸ್‌ ವಶಕ್ಕೆ

ಕೆ.ಸಿ ರೋಡ್ ನಿವಾಸಿ ಹನೀಫ್ ಎಂಬವರ ಪುತ್ರ ಹಕೀಫ್‌ (13) ಮೃತ ಬಾಲಕ. ಅವರ ಮನೆಯಿಂದ 3 ಕಿಲೊ ಮೀಟರ್‌ ದೂರದಲ್ಲಿ ಕೊಲೆಯಾದ ಸ್ಥಿತಿಯಲ್ಲಿ ಮೃತದೇಹ ಪತ್ತೆಯಾಗಿದೆ.

ಶನಿವಾರ ಸಂಜೆಯಿಂದ ನಾಪತ್ತೆಯಾಗಿದ್ದ ಹಕೀಫ್‌ ಕುರಿತು ಹೆತ್ತವರು ಉಳ್ಳಾಲ ಪೊಲೀಸ್ ಠಾಣೆಯಲ್ಲಿ ನಾಪತ್ತೆ ದೂರು‌ ದಾಖಲಿಸಿದ್ದರು.

ಪಬ್ ಜಿ ವಿಚಾರಕ್ಕೆ ಸಂಬಂಧಿಸಿ ಬಾಲಕರ ನಡುವಿನ ಜಗಳ ಕೊಲೆಗೆ ಕಾರಣ ಆಗಿರುವ ಶಂಕೆ ವ್ಯಕ್ತವಾಗಿದೆ. ಸ್ಥಳಕ್ಕೆ ಉಳ್ಳಾಲ ಪೊಲೀಸರು ಭೇಟಿ ನೀಡಿದ್ದಾರೆ.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು