ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಎಸಿಬಿ ಹೆಸರಲ್ಲಿ ಸುಲಿಗೆ: 26 ಎಫ್‌ಐಆರ್‌ ದಾಖಲು -ಸೀಮಾಂತ್‌ ಕುಮಾರ್‌ ಮಾಹಿತಿ

Last Updated 4 ಮೇ 2022, 15:41 IST
ಅಕ್ಷರ ಗಾತ್ರ

ಬೆಂಗಳೂರು: ಭ್ರಷ್ಟಾಚಾರ ನಿಗ್ರಹ ದಳದ (ಎಸಿಬಿ) ಅಧಿಕಾರಿಗಳ ಹೆಸರು ಬಳಸಿಕೊಂಡು ದುಷ್ಕರ್ಮಿಗಳು ಸರ್ಕಾರಿ ಅಧಿಕಾರಿಗಳು ಮತ್ತು ನೌಕರರಿಂದ ಹಣ ವಸೂಲಿ ಮಾಡುತ್ತಿರುವ ಆರೋಪದ ಮೇಲೆ ರಾಜ್ಯದ ವಿವಿಧೆಡೆ ಒಟ್ಟು 26 ಎಫ್‌ಐಆರ್‌ಗಳನ್ನು ದಾಖಲಿಸಲಾಗಿದೆ ಎಂದು ಎಸಿಬಿ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ ಸೀಮಾಂತ್‌ ಕುಮಾರ್‌ ಸಿಂಗ್‌ ತಿಳಿಸಿದ್ದಾರೆ.

‘ಸರ್ಕಾರಿ ನೌಕರರು ನೀಡಿರುವ ದೂರುಗಳನ್ನು ಆಧರಿಸಿ ಪ್ರಕರಣ ದಾಖಲಿಸಲಾಗಿದೆ. ಈ ಪೈಕಿ ಆರು ಪ್ರಕರಣಗಳಲ್ಲಿ ನ್ಯಾಯಾಲಯಕ್ಕೆ ಆರೋಪಪಟ್ಟಿ ಸಲ್ಲಿಸಲಾಗಿದೆ. 20 ಪ್ರಕರಣಗಳು ತನಿಖಾ ಹಂತದಲ್ಲಿವೆ’ ಎಂದು ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದಾರೆ.

ಎಸಿಬಿ ಅಧಿಕಾರಿಗಳ ಹೆಸರಿನಲ್ಲಿ ಯಾರಾದರೂ ನೇರವಾಗಿ ಭೇಟಿಮಾಡಿ ಅಥವಾ ದೂರವಾಣಿ ಮೂಲಕ ಸಂಪರ್ಕಿಸಿ, ಹಣ, ಇತರ ಉಡುಗೊರೆಗಳಿಗೆ ಬೇಡಿಕೆ ಇಟ್ಟಲ್ಲಿ ಸರ್ಕಾರಿ ನೌಕರರು ತಕ್ಷಣ ತನಿಖಾ ಸಂಸ್ಥೆಯ ಅಧಿಕಾರಿಗಳಿಗೆ ಮಾಹಿತಿ ನೀಡಬೇಕು. ಸ್ಥಳೀಯ ಪೊಲೀಸ್‌ ಠಾಣೆಗಳಲ್ಲಿ ದೂರು ದಾಖಲಿಸಬೇಕು ಎಂದು ಅವರು ಸಲಹೆ ನೀಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT