ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸುಳ್ಳು ಸುತ್ತೋಲೆ ಸೃಷ್ಟಿಸಿದವರ ವಿರುದ್ಧ ಕ್ರಿಮಿನಲ್ ಕೇಸ್: ಅಶ್ವತ್ಥ ನಾರಾಯಣ

Last Updated 14 ಮಾರ್ಚ್ 2021, 15:22 IST
ಅಕ್ಷರ ಗಾತ್ರ

ಹುಬ್ಬಳ್ಳಿ: ಕೋವಿಡ್ ಸೋಂಕು ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ಸೋಮವಾರದಿಂದ 15 ದಿನಗಳ ಕಾಲ ಸರ್ಕಾರಿ ಅನುದಾನಿತ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ ಎಂಬ ಸುಳ್ಳುಸುದ್ದಿ ಸಾಮಾಜಿಕ ತಾಣಗಳಲ್ಲಿ ಹರಿದಾಡುತ್ತಿದ್ದು, ಈ ಸುಳ್ಳು ಸುದ್ದಿ ಹರಡಿದವರ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸುವಂತೆ ಉನ್ನತ ಶಿಕ್ಷಣ ಸಚಿವರೂ ಆದ ಉಪ ಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥನಾರಾಯಣ ಅವರು ತಮ್ಮ ಇಲಾಖೆಯ ಅಧಿಕಾರಿಗಳಿಗೆ ಸೂಚಿಸಿದ್ದಾರೆ.

ಭಾನುವಾರ ಇಲ್ಲಿ ಮಾಧ್ಯಮದವರ ಜೊತೆ ಮಾತನಾಡಿದ ಅವರು ಸರ್ಕಾರ ಯಾವುದೇ ಕಾರಣಕ್ಕೂ ಕಾಲೇಜುಗಳಿಗೆ ರಜೆ ನೀಡುವ ನಿರ್ಧಾರ ಕೈಗೊಂಡಿಲ್ ಎಂದರು.

ಕಿಡಿಗೇಡಿಗಳು ನಕಲಿ ಸುತ್ತೋಲೆಯನ್ನು ಜಾಲತಾಣಗಳಲ್ಲಿ ಹರಿಯಬಿಟ್ಟಿದ್ದಾರೆ, ಅದು ವೈರಲ್ ಆಗಿದೆ. ವಿದ್ಯಾರ್ಥಿಗಳು ಮತ್ತು ಪೋಷಕರಿಗೆ ತೀವ್ರ ಗೊಂದಲವಾಗಿದೆ. ಅದೂ ಸರ್ಕಾರದ ಹೆಸರಿನಲ್ಲಿ ನಕಲಿ ಸುತ್ತೋಲೆ ಸೃಷ್ಟಿಸುವುದು ದೊಡ್ಡ ಅಪರಾಧ. ಹೀಗಾಗಿ ಸೈಬರ್ ಪೊಲೀಸರಿಗೆ ತಕ್ಷಣ ಕಿಡಿಗೇಡಿಗಳನ್ನು ಪತ್ತೆ ಹಚ್ಚುವಂತೆ ಸೂಚಿಲಾಗಿದೆ ಎಂದು ಹೇಳಿದರು.

ಮಕ್ಕಳ ಭವಿಷ್ಯದ ಜತೆ ಯಾರೂ ಚೆಲ್ಲಾಟ ಆಡಬಾರದು. ಮೊದಲೇ ಕೋವಿಡ್ ಕಾರಣಕ್ಕೆ ಎಲ್ಲರಿಗೂ ಆತಂಕ ಇದೆ. ಶೈಕ್ಷಣಿಕ ವ್ಯವಸ್ಥೆ ಹಳಿ ತಪ್ಪದಂತೆ ಸರ್ಕಾರ ಎಲ್ಲ ಕ್ರಮಗಳನ್ನ ಕೈಗೊಳ್ಳುತ್ತಿದ್ದರೂ ಕೆಲವರು ಇಂಥ ಕೃತ್ಯ ಎಸಗಿದ್ದಾರೆ. ಅಂಥವರಿಗೆ ತಕ್ಕ ಶಾಸ್ತಿ ಕಾದಿದೆ ಎಂದು ಎಚ್ಚರಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT