ಬುಧವಾರ, ಅಕ್ಟೋಬರ್ 21, 2020
24 °C

‘ಲಾಕ್‌ಡೌನ್‌ ವೇಳೆ ಮದ್ಯ ಮಾರಿದ್ದರೆ ಕ್ರಿಮಿನಲ್ ಪ್ರಕರಣ’

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ರಾಜ್ಯದಲ್ಲಿ ಲಾಕ್‌ಡೌನ್‌ ಅವಧಿಯ ಆರಂಭದಲ್ಲಿ ಮದ್ಯದಂಗಡಿಗಳಲ್ಲಿ ಇದ್ದ ಮದ್ಯದ ಸ್ಟಾಕ್‌ ಮತ್ತು ಲಾಕ್‌ಡೌನ್‌ ಅಂತ್ಯದಲ್ಲಿ ಲಭ್ಯವಿದ್ದ ಸ್ಟಾಕ್‌ನಲ್ಲಿ ವ್ಯತ್ಯಾಸವಿದ್ದರೆ, ಅದನ್ನು ಕಳ್ಳತನದ ವ್ಯಾಪಾರ ಎಂದು ಪರಿಗಣಿಸಿ ಕ್ರಿಮಿನಲ್‌ ಪ್ರಕರಣ ದಾಖಲಿಸಬೇಕೆಂದು ಸಾರ್ವಜನಿಕ ಲೆಕ್ಕಪತ್ರ ಸಮಿತಿ ನಿರ್ದೇಶನ ನೀಡಿದೆ.

ಹಣಕಾಸು ಇಲಾಖೆ ಅಪರ ಮುಖ್ಯಕಾರ್ಯದರ್ಶಿಯವರಿಗೆ ಈ ಸಂಬಂಧ ಸಮಿತಿ ಅಧ್ಯಕ್ಷ ಎಚ್‌.ಕೆ.ಪಾಟೀಲ ಸೂಚನೆ ನೀಡಿದರು.

ಬಳಿಕ ಸುದ್ದಿಗಾರರ ಜತೆ ಮಾತನಾಡಿದ ಪಾಟೀಲರು, ‘ಲಾಕ್‌ಡೌನ್‌ ಸಂದರ್ಭದಲ್ಲಿ ಮದ್ಯ ಮಾರಾಟ ಸೇರಿದಂತೆ ಅನೇಕ ಅನಪೇಕ್ಷಣೀಯ ವ್ಯವಹಾರಗಳು ನಡೆದಿವೆ. ಮದ್ಯದಂಗಡಿಗಳನ್ನು ಅಧಿಕೃತವಾಗಿ ಆರಂಭಿಸುವವರೆಗೆ ನಡೆದಿರುವ ವ್ಯಾಪಾರ ಕಳ್ಳಮಾರ್ಗದಲ್ಲಿ ನಡೆದಿರುವಂತದ್ದಾಗಿದೆ ಎಂದು ಸಭೆಯಲ್ಲಿ ಎಲ್ಲ ಸದಸ್ಯರು ಅಭಿಪ್ರಾಯಪಟ್ಟರು’ ಎಂದು ಹೇಳಿದರು.

ಡಿಸ್ಟಿಲರಿಗಳ ಮೂಲಗಳ ಮೂಲಕ ಮದ್ಯಸಾರ ಉತ್ಪಾದನೆ ಮತ್ತು ಇಳುವರಿಗಳಲ್ಲಿ ವ್ಯತ್ಯಾಸವಾಗಿ ಸರ್ಕಾರದ ಬೊಕ್ಕಸಕ್ಕೆ ಸಾವಿರಾರು ಕೋಟಿ ಪ್ರತಿ ವರ್ಷ ನಷ್ಟವಾಗುತ್ತಿದೆ ಎಂದು ಈ ಹಿಂದೆ ಸಾರಾಯಿ ನಿಷೇಧ ಮಾಡಲಾಯಿತು. ಆ ಬಳಿಕ ಸಾರಾಯಿ ಮಾರಾಟಗಾರರಿಗೆ ಪುನರ್ವಸತಿ ಕಲ್ಪಿಸಲಿಲ್ಲ. ಈ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಸಭೆಯಲ್ಲಿ ಕಾಂಗ್ರೆಸ್‌ನ ‌ ಕೆ.ಆರ್‌.ರಮೇಶ್‌ ಕುಮಾರ್‌, ಬಿ.ಕೆ.ಹರಿಪ್ರಸಾದ್‌ ಮತ್ತು ಇತರ ಸದಸ್ಯರು ಟೀಕಿಸಿದರು.

ಲಾಕ್‌ಡೌನ್‌ ಸಂದರ್ಭದ ಮದ್ಯ ವ್ಯಾಪಾರದ ಬಗ್ಗೆ ಅಬಕಾರಿ ಆಯುಕ್ತರು ಮತ್ತು ಅಧಿಕಾರಿಗಳು ಪೂರ್ಣ ಮಾಹಿತಿ ಒದಗಿಸದೇ ಇರುವ ಬಗ್ಗೆ ಸಭೆಯಲ್ಲಿ ಸದಸ್ಯರು ಅಸಮಾಧಾನ ವ್ಯಕ್ತಪಡಿಸಿದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು