ಸೋಮವಾರ, ಜುಲೈ 4, 2022
25 °C

ಗಣರಾಜ್ಯೋತ್ಸವ ಸ್ತಬ್ಧಚಿತ್ರದಲ್ಲಿ ಕನ್ನಡ ಕಡೆಗಣನೆ: ಜಾಲತಾಣಗಳಲ್ಲಿ ಟೀಕೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಹೊಸಪೇಟೆ: ಗಣರಾಜ್ಯೋತ್ಸವದ ನಿಮಿತ್ತ ರಾಜಪಥದಲ್ಲಿ ಜ. 26ರಂದು ನಡೆಯಲಿರುವ ಪಥಸಂಚಲನದಲ್ಲಿ ಪಾಲ್ಗೊಳ್ಳಲಿರುವ ವಿಜಯನಗರ ಸಾಮ್ರಾಜ್ಯದ ವೈಭವ ಸಾರುವ ಸ್ತಬ್ಧಚಿತ್ರದಲ್ಲಿ ಕನ್ನಡ ಕಡೆಗಣಿಸಿರುವುದಕ್ಕೆ ಸಾಮಾಜಿಕ ಜಾಲತಾಣಗಳಲ್ಲಿ ಟೀಕೆಗಳು ವ್ಯಕ್ತವಾಗಿವೆ.

ಸ್ತಬ್ಧಚಿತ್ರದ ಮುಂಭಾಗದಲ್ಲಿ ಕನ್ನಡದ ಬದಲು ಹಿಂದಿ ಭಾಷೆಯಲ್ಲಿ ಕರ್ನಾಟಕ ಎಂದು ಬರೆಯಲಾಗಿದೆ. ಇಷ್ಟೇ ಅಲ್ಲ, ಕನ್ನಡ ಬಾವುಟದ ಬದಲು ಕೇಸರಿ ಧ್ವಜ ಬಳಸಲಾಗಿದೆ. ಇದೇ ವಿಷಯ ಈಗ ಟೀಕೆಗೆ ಕಾರಣವಾಗಿದೆ.

ಇದೇನು ಒಕ್ಕೂಟ ವ್ಯವಸ್ಥೆಯ ದೇಶವೋ ಏನು? ಕನ್ನಡ ಬಾವುಟ ಎಲ್ಲಿ? ಗಣತಂತ್ರ ಅಂದರೆ ಒಂದು ಧರ್ಮದ ಬಾವುಟ ಹಾಕುವುದೇ? ಹೀಗೆ ಫೇಸಬುಕ್‌, ಟ್ವಿಟರ್‌ನಲ್ಲಿ ಕನ್ನಡಿಗರು ಪ್ರಶ್ನಿಸಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು