ಶನಿವಾರ, 27 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ವರ್ಷಾಂತ್ಯದೊಳಗೆ ನೌಕರರ ವೇತನಪರಿಷ್ಕರಣೆ ನಿರೀಕ್ಷೆ’: ಸಿ.ಎಸ್. ಷಡಕ್ಷರಿ

Last Updated 26 ಜೂನ್ 2022, 21:24 IST
ಅಕ್ಷರ ಗಾತ್ರ

ಉಡುಪಿ: ‘ಡಿಸೆಂಬರ್ ಒಳಗೆ ರಾಜ್ಯ ಸರ್ಕಾರಿ ನೌಕರರಿಗೆ 7ನೇ ವೇತನ ಆಯೋಗದ ಸೌಲಭ್ಯ ಒದಗಿಸಿಕೊಡುವ ನಿಟ್ಟಿನಲ್ಲಿ ಸಂಘ ಬದ್ಧವಾಗಿದೆ’ ಎಂದು ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿ.ಎಸ್.ಷಡಕ್ಷರಿ ಹೇಳಿದರು.

ಇಲ್ಲಿ ಜಿಲ್ಲಾ ಸರ್ಕಾರಿ ನೌಕರರ ವಾರ್ಷಿಕ ಸಮಾವೇಶದಲ್ಲಿ ಅವರು,7ನೇ ವೇತನ ಆಯೋಗದ ರಚನೆ ಕುರಿತು ತಿಂಗಳಲ್ಲಿ ಸಮಿತಿ ರಚನೆಯಾಗಲಿದೆ. ವರ್ಷಾಂತ್ಯದೊಳಗೆ ಸೌಲಭ್ಯ ಕಲ್ಪಿಸಲು ಒತ್ತಾಯಿಸಲಾಗಿದೆ ಎಂದರು.

ಸರ್ಕಾರಿ ನೌಕರರಿಗೆ ನಗದು ರಹಿತ ಉಚಿತ ಆರೋಗ್ಯ ಚಿಕಿತ್ಸೆ ನೀಡುವ ಯೋಜನೆ ಶೀಘ್ರ ಜಾರಿಯಾಗಲಿದೆ. ನೌಕರರು ಹಾಗೂ ಅವಲಂಬಿತರಿಗೆ ಈ ಸೌಲಭ್ಯ ದೊರೆಯಲಿದೆ ಎಂದರು.

ಕೆಜಿಐಡಿ ಸೌಲಭ್ಯಕ್ಕೆ ಆನ್‌‌ಲೈನ್‌ನಲ್ಲಿ ಅರ್ಜಿ ಸಲ್ಲಿಸಿದರೆ ವಾರದೊಳಗೆ ಸಾಲದ ಮೊತ್ತ ಖಾತೆಗೆ ಜಮೆ
ಯಾಗುವ ವ್ಯವಸ್ಥೆ ತಿಂಗಳೊಳಗೆ ಜಾರಿಗೆ ತರುವ ಚಿಂತನೆಯಿದೆ. 2019ರಿಂದ ಬಾಕಿ ಇರುವ ಕೆಜಿಐಡಿ ಬೋನಸ್
ಮೊತ್ತ ₹ 488 ಕೋಟಿ ವಾರದೊಳಗೆ ಬಿಡುಗಡೆ ಆಗಲಿದೆ. ಎನ್‌ಪಿಎಸ್ ಬದಲು ಹಳೆಯ ಪಿಂಚಣಿ
ವ್ಯವಸ್ಥೆಯ ಮರುಜಾರಿ ಕುರಿತಂತೆ ಮುಖ್ಯಮಂತ್ರಿ ಅವರ ಜೊತೆಗೆ ಚರ್ಚಿಸಲಾಗಿದೆ ಎಂದು ಷಡಕ್ಷರಿ ಅವರು ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT