ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಂವಿಧಾನದ 8ನೇ ಪರಿಚ್ಛೇದಕ್ಕೆ ತುಳು ಭಾಷೆಯನ್ನು ಸೇರಿಸಲು ಸಿ.ಟಿ.ರವಿ ಒತ್ತಾಯ

ಅಕ್ಷರ ಗಾತ್ರ

ಬೆಂಗಳೂರು: ತುಳು ಭಾಷೆಯನ್ನು ಭಾರತ ಸಂವಿಧಾನದ 8ನೇ ಪರಿಚ್ಛೇದಕ್ಕೆ ಸೇರಿಸಬೇಕೆಂದು ಬಿಜೆಪಿ ಮುಖಂಡ ಸಿ.ಟಿ.ರವಿ ಒತ್ತಾಯಿಸಿದ್ದಾರೆ.

ಈ ವಿಚಾರವಾಗಿ ಭಾನುವಾರ ಟ್ವೀಟ್‌ ಮಾಡಿರುವ ಅವರು, 'ಹದಿನೈದನೆಯ ಶತಮಾನದವರೆಗೆ ತನ್ನ ಸ್ವಂತ ಲಿಪಿಯನ್ನು ಹೊಂದಿದ್ದ ಭಾಷೆ ತುಳು. 19 ಲಕ್ಷಕ್ಕೂ ಅಧಿಕ ಮಂದಿಗೆ ತುಳು ಮಾತೃಭಾಷೆಯಾಗಿದೆ. ಮುಖ್ಯವಾಗಿ ದಕ್ಷಿಣ ಕನ್ನಡ, ಉಡುಪಿ, ಕಾಸರಗೋಡು ಜಿಲ್ಲೆಗಳಲ್ಲಿ ಮತ್ತು ಮಡಿಕೇರಿ, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಯ ಕೆಲ ಭಾಗಗಳಲ್ಲಿ ವ್ಯವಹಾರದ ಭಾಷೆಯಾಗಿ ತುಳು ಬಳಸಲ್ಪಡುತ್ತದೆ' ಎಂದು ತಿಳಿಸಿದ್ದಾರೆ.

'ಐತಿಹಾಸಿಕ ಹಾಗೂ ಸಾಂಸ್ಕೃತಿಕ ಅಸ್ಮಿತೆ ಹೊಂದಿರುವ ತುಳು ಭಾಷೆಯನ್ನು ಭಾರತ ಸಂವಿಧಾನದ 8ನೇ ಪರಿಚ್ಛೇದಕ್ಕೆ ಸೇರಿಸಬೇಕು. ಇದು ತುಳು ಭಾಷಿಕರ ಸಂಸ್ಕೃತಿ ಹಾಗೂ ಸಾಂಸ್ಕೃತಿಕ ಅಸ್ಮಿತೆಯನ್ನು ಬೆಳೆಸುವಲ್ಲಿ ಸಹಕಾರಿಯಾಗಲಿದೆ. ಹಾಗೆಯೇ, ತುಳು ಲಿಪಿಯ ಪುನರುತ್ಥಾನದಲ್ಲಿಯೂ ಪ್ರಮುಖ ಪಾತ್ರ ವಹಿಸಲಿದೆ' ಎಂದು ಸಿ.ಟಿ.ರವಿ ಟ್ವೀಟ್‌ ಮಾಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT