ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಗೋರಿಪಾಳ್ಯದ ಕೊಲೆ ಕುರಿತ ಹೇಳಿಕೆ: ಸಿ.ಟಿ.ರವಿ ವಿರುದ್ಧ ಸಿದ್ದರಾಮಯ್ಯ ವಾಗ್ದಾಳಿ

Last Updated 6 ಏಪ್ರಿಲ್ 2022, 13:14 IST
ಅಕ್ಷರ ಗಾತ್ರ

ಬೆಂಗಳೂರು: ಗೋರಿಪಾಳ್ಯದ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಹೇಳಿಕೆಗೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಈ ಕುರಿತು ಸರಣಿ ಟ್ವೀಟ್‌ ಮಾಡಿರುವ ಅವರು, ‘ಬೈಕ್ ಡಿಕ್ಕಿಗೆ ಸಂಬಂಧಿಸಿದ ಗಲಾಟೆಯಲ್ಲಿ ನಡೆದ ಕೊಲೆಯಲ್ಲೂ ಭಾಷೆ, ಧರ್ಮ ಎಳೆದುತಂದು ಸಮಾಜಕ್ಕೆ ಬೆಂಕಿ ಹಚ್ಚುವ ಸಿ.ಟಿ.ರವಿಯಂಥ ಕೋಮು ತಂಟೆಕೋರರ ವಿರುದ್ಧ ಪೊಲೀಸರು ಮೊದಲು ಕ್ರಮಕೈಗೊಳ್ಳಬೇಕು’ ಎಂದು ಒತ್ತಾಯಿಸಿದ್ದಾರೆ.

‘ಗೋರಿಪಾಳ್ಯದ ಕೊಲೆ ಪ್ರಕರಣದ ಬಗ್ಗೆ ಈಗಾಗಲೇ ಪೊಲೀಸ್ ಮಹಾನಿರ್ದೇಶಕರು ಹೇಳಿಕೆ ನೀಡಿ,‌ ಇದು ವೈಯಕ್ತಿಕ ಘರ್ಷಣೆಯಿಂದ ನಡೆದ ಹತ್ಯೆ, ಭಾಷೆ ವಿಚಾರಕ್ಕೆ ಅಲ್ಲ‌‌ ಎಂದು ಹೇಳಿದ್ದಾರೆ. ಕೋಮುದ್ವೇಷ ಕಕ್ಕುವುದು ಮತ್ತು ಎಲ್ಲದಕ್ಕೂ ನನ್ನ ಹೆಸರು ಎಳೆದು ತರುವುದು ಸಿ.ಟಿ.ರವಿ ಅವರಿಗೆ ಮಾನಸಿಕ ರೋಗವಾಗಿ ಬಿಟ್ಟಿದೆ’ ಎಂದು ಸಿದ್ದರಾಮಯ್ಯ ಟೀಕಿಸಿದ್ದಾರೆ.

‘ಮೇಕೆದಾಟು ಕುಡಿಯುವ ನೀರಿನ ಯೋಜನೆ ವಿಷಯದಲ್ಲಿ ಮೌನವಾಗಿದ್ದು ತಮಿಳುನಾಡಿಗೆ ನೆರವಾಗುವ, ಕನ್ನಡ ಭಾಷೆಯನ್ನು ಹತ್ತಿಕ್ಕಿ ಹಿಂದಿ ಭಾಷೆ ಹೇರುವ ಕೇಂದ್ರ ಸರ್ಕಾರದ ದಮನಕಾರಿ ನಿಲುವನ್ನು ಬೆಂಬಲಿಸುವ ಸಿ.ಟಿ.ರವಿ ಅವರ ಒಂದು ಕಾಲು ಹೇಗೂ ರಾಜ್ಯದ ಹೊರಗಿದೆ, ಇನ್ನೊಂದು ಕಾಲನ್ನೂ ಎತ್ತಿ ಹೊರಗೆ ಹೋದರೆ ರಾಜ್ಯಕ್ಕೆ ಕ್ಷೇಮ’ ಎಂದು ಟ್ವೀಟಿಸಿದ್ದಾರೆ.

ಬೆಂಗಳೂರಿನ ಗೋರಿಪಾಳ್ಯದಲ್ಲಿ ಚೂರಿ ಇರಿತದಿಂದಾಗಿ ಗಂಭೀರವಾಗಿ ಗಾಯಗೊಂಡಿದ್ದ ಚಂದ್ರು (22) ಎಂಬ ಯುವಕ ಚಿಕಿತ್ಸೆಗೆ ಸ್ಪಂದಿಸದೆ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾನೆ. ಪ್ರಕರಣ ಸಂಬಂಧ ಜೆಜೆ ನಗರ ಪೊಲೀಸರು ಮೂವರನ್ನು ಬಂಧಿಸಿದ್ದಾರೆ.

ಈ ಪ್ರಕರಣಕ್ಕೆ ಕೋಮುಬಣ್ಣ ಬಳಿಯಲು ಸಿ.ಟಿ.ರವಿ ಯತ್ನಿಸಿದ್ದಾರೆ ಎಂಬ ಆರೋಪಗಳು ಕೇಳಿಬಂದಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT