ಭಾನುವಾರ, ನವೆಂಬರ್ 29, 2020
24 °C
ಮುಂಬೈ ಆಕಾಶವಾಣಿಯಲ್ಲಿ ಕನ್ನಡ ಕಾರ್ಯಕ್ರಮ

ಮುಂಬೈ ಆಕಾಶವಾಣಿಯಲ್ಲಿ ಕನ್ನಡ ಕಾರ್ಯಕ್ರಮ ಪುನರಾರಂಭಕ್ಕೆ ಸಿ.ಟಿ ರವಿ ಪತ್ರ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಮುಂಬೈ ಆಕಾಶವಾಣಿ ಕೇಂದ್ರದಿಂದ ಪ್ರಸಾರವಾಗುತ್ತಿದ್ದ ಕನ್ನಡ ಕಾರ್ಯಕ್ರಮವನ್ನು ಪುನರಾರಂಭಿಸುವಂತೆ ಒತ್ತಾಯಿಸಿ ಕನ್ನಡ ಮತ್ತು ಸಂಸ್ಕೃತಿ ಸಚಿವ ಸಿ.ಟಿ. ರವಿ, ಕೇಂದ್ರ ಮಾಹಿತಿ ಮತ್ತು ಪ್ರಸಾರ ಖಾತೆ ಸಚಿವ ಪ್ರಕಾಶ್‌ ಜಾವಡೇಕರ್‌ ಅವರಿಗೆ ಪತ್ರ ಬರೆದಿದ್ದಾರೆ.

ಸಾಹಿತಿ ಪ್ರೊ. ಬರಗೂರು ರಾಮಚಂದ್ರಪ್ಪ ಅವರು ರವಿ ಅವರಿಗೆ ಪತ್ರ ಬರೆದು, ಮುಂಬೈ ಆಕಾಶವಾಣಿಯಿಂದ ಪ್ರಸಾರವಾಗುತ್ತಿದ್ದ ಕನ್ನಡ ಕಾರ್ಯಕ್ರಮದ ಪುನರಾರಂಭಕ್ಕೆ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದ್ದರು. ಆ ಬಳಿಕ ಸಚಿವರು ಜಾವಡೇಕರ್‌ ಮತ್ತು ಪ್ರಸಾರ ಭಾರತಿ ಅಧ್ಯಕ್ಷರಿಗೆ ಪತ್ರ ಬರೆದು, ಕಾರ್ಯಕ್ರಮ ಪುನರಾರಂಭಕ್ಕೆ ಒತ್ತಾಯಿಸಿದ್ದಾರೆ.

‘ಮುಂಬೈ ಆಕಾಶವಾಣಿಯಲ್ಲಿ ಏಳು ದಶಕಗಳಿಂದ ಕನ್ನಡ ಕಾರ್ಯಕ್ರಮ ಪ್ರಸಾರವಾಗುತ್ತಿತ್ತು. 25 ಲಕ್ಷಕ್ಕೂ ಹೆಚ್ಚು ಜನರು ಈ ಕಾರ್ಯಕ್ರಮ ಕೇಳುತ್ತಿದ್ದರು. ಏಕಾಏಕಿ ಕಾರ್ಯಕ್ರಮವನ್ನು ರದ್ದುಪಡಿಸಿರುವುದರಿಂದ ಹಲವರಿಗೆ ಬೇಸರ ಉಂಟಾಗಿದೆ’ ಎಂದು ಪತ್ರದಲ್ಲಿ ಹೇಳಿದ್ದಾರೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು