ಸೋಮವಾರ, ಮಾರ್ಚ್ 1, 2021
17 °C

ಅಧಿವೇಶನ: ವಿಧಾನಸೌಧ ಸುತ್ತಲ 2 ಕಿಮೀ ವ್ಯಾಪ್ತಿಯಲ್ಲಿ ಇಂದಿನಿಂದ ನಿಷೇಧಾಜ್ಞೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ವಿಧಾನಮಂಡಲ ಅಧಿವೇಶನ ನಡೆಯುವುದರಿಂದ ಜ.28ರಿಂದ ಫೆ.5ರವರೆಗೆ ನಿಷೇಧಾಜ್ಞೆ (ಸೆಕ್ಷನ್ 144) ಜಾರಿಗೊಳಿಸಿ ಬೆಂಗಳೂರು ನಗರ ಪೊಲೀಸ್ ಕಮಿಷನರ್ ಕಮಲ್ ಪಂತ್ ಆದೇಶ ಹೊರಡಿಸಿದ್ದಾರೆ.

ಅಧಿವೇಶನ ನಡೆಯುವ ವಿಧಾನಸೌಧದ ಸುತ್ತಲೂ ಎರಡು ಕಿ.ಮೀ.ವ್ಯಾಪ್ತಿಯಲ್ಲಿ ಬೆಳಿಗ್ಗೆ 6ರಿಂದ ಮಧ್ಯರಾತ್ರಿ 12 ಗಂಟೆವರೆಗೆ ನಿಷೇಧಾಜ್ಞೆ ಇರಲಿದೆ.

‘ಈ ಅವಧಿಯಲ್ಲಿ ಐದಕ್ಕಿಂತ ಹೆಚ್ಚು ಮಂದಿ ಗುಂಪು ಸೇರುವುದು, ಮೆರವಣಿಗೆ ಮತ್ತು ಸಭೆ ಸೇರುವುದು, ಸ್ಫೋಟಕ ಸಿಡಿಸುವುದು, ಪ್ರತಿಕೃತಿ ದಹನ, ಘೋಷಣೆಗಳನ್ನು ಕೂಗುವುದು, ಶಸ್ತ್ರಾಸ್ತ್ರ ಹಾಗೂ ಮಾರಕಾಸ್ತ್ರಗಳನ್ನು ಒಯ್ಯುವುದನ್ನು ನಿಷೇಧಿಸಲಾಗಿದೆ’ ಎಂದೂ ಆದೇಶದಲ್ಲಿ ತಿಳಿಸಿದ್ದಾರೆ.

 

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು