ಮಂಗಳವಾರ, ಮೇ 18, 2021
28 °C

ಲಾಕ್‌ಡೌನ್‌ ರೀತಿಯಲ್ಲಿ ವಾರಾಂತ್ಯ ಕರ್ಫ್ಯೂ: ಬಸವರಾಜ ಬೊಮ್ಮಾಯಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೆಂಗಳೂರು:ವಾರಾಂತ್ಯದ ಬಂದ್‌ ಲಾಕ್‌ಡೌನ್‌ ಮಾದರಿಯಲ್ಲೇ ಕಟ್ಟುನಿಟ್ಟಾಗಿರಲಿದೆ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ಹೇಳಿದರು.

ಬಿಬಿಎಂಪಿ ಆಯುಕ್ತರು, ಪೊಲೀಸ್‌ ಆಯುಕ್ತರು ಮತ್ತು ಡಿಸಿಪಿಗಳ ಜತೆ ನಡೆದ ಸಭೆಯ ಬಳಿಕ ಸುದ್ದಿಗಾರರ ಜತೆ ಮಾತನಾಡಿದ ಅವರು, ಹೊರ ಜಿಲ್ಲೆಗಳ ಪ್ರವೇಶದ ರಸ್ತೆಗಳು, ಫ್ಲೈಓವರ್‌, ಪ್ರಮುಖ ರಸ್ತೆಗಳನ್ನು ಬಂದ್‌ ಮಾಡಲಾಗುವುದು ಎಂದರು.

ಮಾರ್ಗಸೂಚಿ ಉಲ್ಲಂಘನೆ ಮಾಡುವವರ ಮೇಲೆ ಕಟ್ಟುನಿಟ್ಟಿನ ಕ್ರಮ ತೆಗೆದುಕೊಳ್ಳಬೇಕು. ವಿನಾಕಾರಣ ಓಡಾಡಲು ವಾಹನಗಳನ್ನು ಬಳಸಿದರೆ ಅದನ್ನು ಮುಟ್ಟುಗೋಲು ಹಾಕಿಕೊಳ್ಳಬೇಕು, ಒಳ್ಳೆಯ ಮಾತಿನಲ್ಲಿ ಕೇಳದಿದ್ದರೆ ಕಠಿಣ ಕ್ರಮ ಜರುಗಿಸಿ ಎಂದು ಸಭೆಯಲ್ಲಿ ಬೊಮ್ಮಾಯಿ ಸಲಹೆ ನೀಡಿದರು. ವಾರಾಂತ್ಯದ ಕರ್ಫ್ಯೂ ಸಂದರ್ಭದಲ್ಲಿ ಮದುವೆಗಳು ಇದ್ದರೆ ಕಲ್ಯಾಣ ಮಂಟಪಗಳು, ಛತ್ರಗಳ ಮಾಲೀಕರ ಜತೆಗೆ ಮಾತನಾಡಿ ಕೋವಿಡ್‌ ನಿಯಮ ಉಲ್ಲಂಘಿಸದಂತೆ ಮುಚ್ಚಳಿಕೆ ಬರೆಸಿಕೊಳ್ಳಬೇಕು. ಒಂದು ವೇಳೆ ನಿಯಮ ಉಲ್ಲಂಘನೆ ಮಾಡಿದರೆ ಅಂತಹವುಗಳನ್ನು ಬಂದ್‌ ಮಾಡಿ ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು