ಗುರುವಾರ , ಸೆಪ್ಟೆಂಬರ್ 23, 2021
24 °C

ಕರ್ಫ್ಯೂ ಉಲ್ಲಂಘಿಸಿ ಜನಾಶೀರ್ವಾದ ಯಾತ್ರೆ ನಡೆಸಿದ ಸಚಿವ!

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಕಲಬುರ್ಗಿ: ಕೋವಿಡ್ ನಿಯಂತ್ರಣಕ್ಕಾಗಿ ಜಿಲ್ಲಾಡಳಿತ ವಿಧಿಸಿರುವ ರಾತ್ರಿ ಕರ್ಫ್ಯೂ ಉಲ್ಲಂಘಿಸಿ ಕೇಂದ್ರ ಸಚಿವ ಭಗವಂತ ಖೂಬಾ ಅವರು ಮಂಗಳವಾರ ರಾತ್ರಿ ನಗರದಲ್ಲಿ ಜನಾಶೀರ್ವಾದ ಯಾತ್ರೆಯ ಸಭಾ ಕಾರ್ಯಕ್ರಮ ನಡೆಸಿದರು.

ನಗರದ ವೀರಶೈವ ಕಲ್ಯಾಣ ಮಂಟಪದಲ್ಲಿ ಮಧ್ಯಾಹ್ನ 3.30ಕ್ಕೆ ಕಾರ್ಯಕ್ರಮ ನಿಗದಿಯಾಗಿತ್ತು. ಆದರೆ, ಸಚಿವರು ತಡವಾಗಿ ಬಂದಿದ್ದರಿಂದ ರಾತ್ರಿ 8.30ಕ್ಕೆ ಸಭಾ ಕಾರ್ಯಕ್ರಮ ಆರಂಭವಾಯಿತು.

ಬಿಜೆಪಿ ರಾಜ್ಯ ಘಟಕದ ಉಪಾಧ್ಯಕ್ಷ ಮಾಲೀಕಯ್ಯ ಗುತ್ತೇದಾರ ಅವರು ತಮ್ಮ ಭಾಷಣದಲ್ಲಿ ಕರ್ಫ್ಯೂ ಆರಂಭವಾಗುವುದರೊಳಗಾಗಿ ಕಾರ್ಯಕ್ರಮ ಮುಗಿಸಬೇಕು ಎಂದು ತಿಳಿಸಿದರು. ಆದರೆ, ಸಚಿವ ಖೂಬಾ ಅವರ ಭಾಷಣ ರಾತ್ರಿ 9.25ಕ್ಕೆ ಆರಂಭವಾಯಿತು. 9.49ಕ್ಕೆ ಕಾರ್ಯಕ್ರಮ ಮುಗಿಯಿತು.

ನೋಟಿಸ್‌:  ಯಾತ್ರೆಗೆ ಅನುಮತಿ ನೀಡಿರಲಿಲ್ಲ. ಸಂಘಟಕರಿಗೆ ನೋಟಿಸ್ ಜಾರಿಗೊಳಿಸುತ್ತಿದ್ದೇವೆ   ಎಂದು  ಜಿಲ್ಲಾಧಿಕಾರಿ ವಿ.ವಿ. ಜ್ಯೋತ್ಸ್ನಾ ಪ್ರತಿಕ್ರಿಯಿಸಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು