ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೇಂದ್ರ ಸರ್ಕಾರದ ಇಂಧನ ದರ ಏರಿಕೆ ಖಂಡಿಸಿ ಕಾಂಗ್ರೆಸ್‌ನಿಂದ ಸೈಕಲ್‌ ಜಾಥಾ

Last Updated 20 ಸೆಪ್ಟೆಂಬರ್ 2021, 6:05 IST
ಅಕ್ಷರ ಗಾತ್ರ

ಬೆಂಗಳೂರು: ಕೇಂದ್ರ ಸರ್ಕಾರದ ನಿರಂತರ ಇಂಧನ ಬೆಲೆ ಹೆಚ್ಚಳ ಹಾಗೂ ತತ್ಪರಿಣಾಮಾಗಿ ದಿನಬಳಕೆ ವಸ್ತುಗಳ ದರ ಏರಿಕೆ ಖಂಡಿಸಿ ಕೆಪಿಸಿಸಿ ಕಚೇರಿಯಿಂದ ವಿಧಾನಸೌಧದವರೆಗೆ ಕಾಂಗ್ರೆಸ್‌ ನಾಯಕರು ಸೋಮವಾರ ಸೈಕಲ್‌ ಜಾಥಾ ನಡೆಸಿದರು.

ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಎಸ್.ಆರ್. ಪಾಟೀಲ ಜಾಥಾದ ನೇತೃತ್ವದ ವಹಿಸಿದ್ದರು.

ಕಾಂಗ್ರೆಸ್ ಪಕ್ಷದ ಮಾಜಿ ಸಚಿವರು, ಶಾಸಕರು, ವಿಧಾನ ಪರಿಷತ್ ಸದಸ್ಯರು, ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹಮದ್, ಶಾಸಕ ಪ್ರಿಯಾಂಕ್ ಖರ್ಗೆ, ವಿಧಾನ ಪರಿಷತ್ ಸದಸ್ಯರಾದ ಯು.ಬಿ. ವೆಂಕಟೇಶ್, ಗೋವಿಂದರಾಜು ಭಾಗವಹಿಸಿದ್ದರು.

ವಿಧಾನಸಭಾ ಅಧಿವೇಶನ ನಡೆಯುತ್ತಿರುವ ಈ ಹೊತ್ತಲ್ಲಿ, ರಾಜ್ಯ ಸರ್ಕಾರಕ್ಕೆ ಬಿಸಿ ಮುಟ್ಟಿಸಲು ಕಾಂಗ್ರೆಸ್‌ ನಾಯಕರು ಈ ಜಾಥಾ ನಡೆಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT