ಭಾನುವಾರ, ಮಾರ್ಚ್ 26, 2023
24 °C

ವಾಯುಭಾರ ಕುಸಿತ: 4 ಜಿಲ್ಲೆಗಳಲ್ಲಿ ‘ಯೆಲ್ಲೊ ಅಲರ್ಟ್‌’ ಮುಂದುವರಿಕೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Rain PTI

ಬೆಂಗಳೂರು: ಶ್ರೀಲಂಕಾ ಭಾಗದಲ್ಲಿ ವಾಯುಭಾರ ಕುಸಿತ ಉಂಟಾಗಿರುವುದರಿಂದ ರಾಜ್ಯದ ಕರಾವಳಿ ಹಾಗೂ ದಕ್ಷಿಣ ಒಳನಾಡಿನ ಕೆಲವು ಜಿಲ್ಲೆಗಳಲ್ಲಿ ನ.6ರವರೆಗೆ ಹೆಚ್ಚು ಮಳೆಯಾಗುವ ಮುನ್ಸೂಚನೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ದಕ್ಷಿಣ ಒಳನಾಡಿನ ಚಿಕ್ಕಮಗಳೂರು, ಹಾಸನ, ಕೊಡಗು ಹಾಗೂ ಶಿವಮೊಗ್ಗ ಜಿಲ್ಲೆಗಳಲ್ಲಿ ನ.2ರಂದ 6ರವರೆಗೆ ಗುಡುಗು, ಸಿಡಿಲು ಸಹಿತ ಭಾರಿ ಮಳೆಯಾಗುವ ಸಾಧ್ಯತೆ ಇರುವುದರಿಂದ ‘ಯೆಲ್ಲೊ ಅಲರ್ಟ್‌’ ಮುಂದುವರಿಸಲಾಗಿದೆ.

ಕರಾವಳಿಯ ಉತ್ತರ ಕನ್ನಡ, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಇದೇ 3ರಿಂದ ಹಾಗೂ ಉತ್ತರ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಇದೇ 6ರಿಂದ ಮಳೆ ಹೆಚ್ಚಾಗಲಿದೆ. ಉಳಿದ ಜಿಲ್ಲೆಗಳಲ್ಲಿ ಗುಡುಗು, ಸಿಡಿಲು ಹೆಚ್ಚಾಗಿ ಇರಲಿದೆ. ಕೆಲವು ಸ್ಥಳಗಳಲ್ಲಿ ಸಾಧಾರಣ ಮಳೆಯಾಗಬಹುದು. 

ಮಳೆ–ಎಲ್ಲಿ, ಎಷ್ಟು?: ದಕ್ಷಿಣ ಕನ್ನಡ ಜಿಲ್ಲೆಯ ಸುಬ್ರಹ್ಮಣ್ಯದಲ್ಲಿ ಸೋಮವಾರ 8 ಸೆಂ.ಮೀ ಗರಿಷ್ಠ ಮಳೆಯಾಗಿದೆ. ಭಾಗಮಂಡಲ 5, ಸುಳ್ಯ, ಸಕಲೇಶಪುರ 4, ಕಾರ್ಕಳ, ಪುತ್ತೂರು 3, ಮೂಡುಬಿದರೆ 2, ಬೆಳ್ತಂಗಡಿ, ಬೆಳಗಾವಿ, ಕೆ.ಆರ್.ಪೇಟೆ, ಶ್ರೀರಂಗಪಟ್ಟಣ, ಮಳವಳ್ಳಿ, ನಂಜನಗೂಡು, ಎಚ್‌.ಡಿ.ಕೋಟೆ, ಮಡಿಕೇರಿ ಹಾಗೂ ಹಾಸನದಲ್ಲಿ ತಲಾ 1 ಸೆಂ.ಮೀ ಮಳೆಯಾಗಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.