ರಾಜ್ಯದಲ್ಲೂ ಎಸ್ಸೆಸ್ಸೆಲ್ಸಿ, ಪಿಯುಸಿ ಪರೀಕ್ಷೆ ರದ್ದು ಮಾಡಿ: ಡಿಕೆಶಿ

ಬೆಂಗಳೂರು: ‘ಕೇಂದ್ರ ಸರ್ಕಾರ ನಿರ್ಧರಿಸಿದಂತೆಯೇ ರಾಜ್ಯ ಸರ್ಕಾರ ಕೂಡಾ ಎಸ್ಸೆಸ್ಸೆಲ್ಸಿ ಮತ್ತು ಪಿಯುಸಿ ವಾರ್ಷಿಷಕ ಪರೀಕ್ಷೆಗಳನ್ನು ರದ್ದು ಮಾಡಬೇಕು’ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.
ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಅವರಿಗೆ ಟ್ವೀಟ್ ಮಾಡಿರುವ ಅವರು, ‘ಕೆಲವೊಮ್ಮೆ ಅನಿವಾರ್ಯ ಸಂದರ್ಭಗಳಲ್ಲಿ ವಿನಾಯಿತಿ ನೀಡಲೇಬೇಕಾಗುತ್ತದೆ’ ಎಂದಿದ್ದಾರೆ.
‘12ನೇ ತರಗತಿಯ ಪರೀಕ್ಷೆಗಳನ್ನು ರದ್ದುಗೊಳಿಸಿರುವ ಕೇಂದ್ರ ಸರ್ಕಾರದ ನಿರ್ಧಾರವನ್ನು ನಾನು ಸ್ವಾಗತಿಸುತ್ತೇನೆ‘ ಎಂದು ಅವರು ಹೇಳಿದ್ದಾರೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.