ಶನಿವಾರ, ಮೇ 15, 2021
22 °C

ಕಾಂಗ್ರೆಸ್‌ ಆಡಳಿತದಲ್ಲಿ ದಲಿತರ ಮೇಲೆ ದೌರ್ಜನ್ಯ: ಬಿಜೆಪಿ ಆರೋಪ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ‘ಕಾಂಗ್ರೆಸ್‌ ಅಧಿಕಾರಕ್ಕೆ ಬಂದಾಗಲೆಲ್ಲ ದಲಿತರ ಮೇಲಿನ ದೌರ್ಜನ್ಯ ಪ್ರಕರಣಗಳು ಹೆಚ್ಚುತ್ತವೆ’ ಎಂದು ಬಿಜೆಪಿ ದೂರಿದೆ.

ಈ ಕುರಿತು ಟ್ವೀಟ್‌ ಮಾಡಿರುವ ಬಿಜೆಪಿ, ‘ಕಂಬಾಲಪಲ್ಲಿ ಹತ್ಯಾಕಾಂಡ ನಡೆದಾಗ ರಾಜ್ಯದಲ್ಲಿ ಗೃಹ ಸಚಿವರಾಗಿ ದ್ದವರು ಯಾರು ಎಂಬುದನ್ನು ನೆನಪಿಸಿ ಕೊಳ್ಳಿ. ನಿಮಗೆ ಮತಕ್ಕಾಗಿ ಮಾತ್ರ ದಲಿತರು ಬೇಕು. ಅಖಂಡ ಶ್ರೀನಿವಾಸ ಮೂರ್ತಿ ಅವರಿಗೆ ಏಕೆ ಇನ್ನೂ ಏಕೆ ನ್ಯಾಯ ಒದಗಿಸಿಲ್ಲ’ ಎಂದು ಪ್ರಶ್ನಿಸಿದೆ.

‘ನಿಮ್ಮದೇ ಕಾಂಗ್ರೆಸ್‌ ಸರ್ಕಾರ ಇದ್ದಾಗ ಪೊಲೀಸರೇ ಸರ್ಕಾರದ ವಿರುದ್ಧ ದಂಗೆ ಎದ್ದಿದ್ದರು. ಅದು ರಾಜ್ಯದ ಇತಿಹಾಸದಲ್ಲಿ ಕಪ್ಪು ಚುಕ್ಕೆ. ಕೆಳ ಹಂತದ ಪೊಲೀಸ್‌ ಸಿಬ್ಬಂದಿಯನ್ನು ನೀವು ದಮನಿಸಿರುವುದನ್ನು ಜನರು ಇನ್ನೂ ಮರೆತಿಲ್ಲ. ಈಗ ಮೊಸಳೆ ಕಣ್ಣೀರು ಸುರಿಸಿ ನಾಯಕ ಎನಿಸಿಕೊಳ್ಳಲು ಸಾಧ್ಯವಿಲ್ಲ’ ಎಂದು ಸಿದ್ದರಾಮಯ್ಯ ಮತ್ತು ಡಿ.ಕೆ.ಶಿವ ಕುಮಾರ್ ಅವರನ್ನು ಉದ್ದೇಶಿಸಿ ಟೀಕಿಸಿದೆ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು