ಸೋಮವಾರ, ಜುಲೈ 4, 2022
24 °C
ಪೊಲೀಸರಿಂದ ನಿಷ್ಪಕ್ಷಪಾತ ತನಿಖೆ, ವಿರೋಧ ಪಕ್ಷದವರಿಂದ ಅನಗತ್ಯ ‌ಗೊಂದಲ

ದಲಿತ ಯುವಕನ ಹತ್ಯೆಯ ಆರೋಪಿಗಳಿಗೆ ಕಠಿಣ ಕಾನೂನು ಕ್ರಮ: ಸಚಿವ ನಿರಾಣಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಕಲುಬುರಗಿಯಲ್ಲಿ ನಡೆದ ದಲಿತ ಯುವಕನ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ತಪ್ಪಿತಸ್ಥ ಆರೋಪಿಗಳನ್ನು ಈಗಾಗಲೇ ಬಂಧಿಸಲಾಗಿದ್ದು, ತಪ್ಪಿತಸ್ಥ ಆರೋಪಿಗಳ ವಿರುದ್ಧ ಕಠಿಣ ಕಾನೂನು ಕ್ರ ಜರುಗಿಸಲಾಗುವುದು ಎಂದು ಕಲಬುರಗಿ ಜಿಲ್ಲಾ ‌ಉಸ್ತುವಾರಿ  ಹಾಗೂ ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಮುರುಗೇಶ್ ನಿರಾಣಿ ಅವರು ‌ಎಚ್ಚರಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಘಟನೆ ನಡೆದ ತಕ್ಷಣವೇ ಪೊಲೀಸರು ಕಾರ್ಯೋನ್ಮುಖರಾಗಿ ತಪ್ಪಿತಸ್ಥರು ಯಾರಿದ್ದಾರೋ ಅವರನ್ನು ಕಾನೂನು ಪ್ರಕಾರವಾಗಿ ಬಂಧಿಸಿದ್ದಾರೆ. ಮುಂದಿನ ಪ್ರಕ್ರಿಯೆಗಳು ಕೂಡ ಕಾನೂನು ಅಡಿಯಲ್ಲೇ ನಡೆಯಬೇಕಾಗರುವುದರಿಂದ ಆರೋಪಿಗಳ ವಿರುದ್ಧ ಕಾನೂನು ಕ್ರಮ ಜರುಗಿಸಿಯೇ ತಿರುತ್ತೇವೆ ಎಂದು ಅವರು ಗುಡುಗಿದರು.

ಪೊಲೀಸರು ಕಟ್ಟುನಿಟ್ಟಿನ ಕ್ರಮ ಕೈಗೊಂಡಿದ್ದರಿಂದಲೇ ಆರೋಪಿಗಳನ್ನು ತಕ್ಷಣವೇ ಬಂಧಿಸಲು ಸಾದ್ಯವಾಗಿದೆ. ನಮ್ಮ ಪೊಲೀಸರು ಸಮರ್ಥರಾಗಿದ್ದರಿಂದಲೇ  ಆರೋಪಿಗಳು ತಪ್ಪಿಸಿಕೊಳ್ಳಲು ಸಾಧ್ಯವಾಗಲಿಲ್ಲ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

ಕಾಂಗ್ರೆಸ್ ಮತ್ತು ಜೆಡಿಎಸ್ ನಾಯಕರು ಇದನ್ನು ರಾಜಕೀಯ ಲಾಭಕ್ಕೆ ಬಳಸಿಕೊಳ್ಳಲು  ಪ್ರಯತ್ನಿಸುತ್ತಿದ್ದಾರೆ.  ನಾನು ಘಟನೆ ಸುದ್ದಿ ತಿಳಿಯುತ್ತಿದ್ದಂತೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಜೊತೆ ದೂರವಾಣಿಯಲ್ಲಿ  ಮಾತನಾಡಿ ತಪ್ಪಿತಸ್ಥರನ್ನು ತಕ್ಷಣವೇ ಬಂಧಿಸುವಂತೆ ಸೂಚಿನೆ ಕೊಡಲಾಗಿತ್ತು.

ಅದರಂತೆ ಪೊಲೀಸರು ಕೂಡಲೇ ವಿಶೇಷ ತಂಡವನ್ನು ರಚಿಸಿ ಪ್ರಕರಣದಲ್ಲಿ ಭಾಗಿಯಾಗಿರುವ ಆರೋಪಿಗಳನ್ನು ಬಂಧಿಸಿದ್ದಾರೆ. 
 ಪ್ರತಿಪಕ್ಷಗಳು ಸಾವಿನ ಪ್ರಕರಣವನ್ನು ಸಹ ರಾಜಕೀಯ ಲಾಭಕ್ಕಾಗಿ ಬಳಸಿಕೊಳ್ಳುವುದು ದುರದೃಷ್ಟಕರ. ನಾವು ನೊಂದ ಕುಟುಂಬಗಳಿಗೆ ನ್ಯಾಯ  ಒದಗಿಸಿ , ಕಾನೂನು ಪ್ರಕಾರವೇ ಆರೋಪಿಗಳಿಗೆ ಶಿಕ್ಷೆಯಾಗಲು ಪ್ರಯತ್ನಿಸುತ್ತಿದ್ದೇವೆ. ಆದರೆ  ಕೆಲವರು ಇದರಲ್ಲೂ ಲಾಭನಷ್ಟದ ಲೆಕ್ಕಾಚಾರ ಹಾಕುತ್ತಿದ್ದಾರೆ ಎಂದು ಅಸಮಾಧಾನ ವ್ಯಕ್ತಪಡಿಸಿದರು. 

ಕಾನೂನು ಪ್ರಕಾರ ಪ್ರತಿಯೊಬ್ಬರಿಗೂ ಶಿಕ್ಷೆಯಾಗಲಿದೆ. ಇದರಲ್ಲಿ ಯಾವುದೇ ಕಾರಣಕ್ಕೂ ರಾಜೀಯಾಗುವುದಿಲ್ಲ ಎಂದು ನಿರಾಣಿ ಸ್ಪಷ್ಟಪಡಿಸಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು