ಮಂಗಳವಾರ, ಅಕ್ಟೋಬರ್ 4, 2022
25 °C

ಮಾಲೂರು: ಗಣೇಶ ವಿಗ್ರಹಗಳಿಗೆ ಹಾನಿ, ಹಲವರು ಪೊಲೀಸ್ ವಶಕ್ಕೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಮಾಲೂರು: ಪಟ್ಟಣದಲ್ಲಿ ಶುಕ್ರವಾರ ರಾತ್ರಿ ದುಷ್ಕರ್ಮಿಗಳು ಹಲವು ಕಡೆ ಗಣೇಶ ಮೂರ್ತಿಗಳನ್ನು ಕೆಡವಿ, ಫ್ಲೆಕ್ಸ್‌ ಬೋರ್ಡ್‌ಗಳನ್ನು ಹರಿದು ಹಾಕಿದ್ದಾರೆ.

ಕುಂಬಾರಪೇಟೆ ವ್ಯಾಪ್ತಿಯಲ್ಲಿ ನಾಲ್ಕು ಗಣಪತಿ ಮೂರ್ತಿಗಳು, ಬಾಬುರಾವ್ ಬೀದಿ, ಕುಪ್ಪಶೆಟ್ಟಿ ಬಾವಿ ಬಳಿ, ಧರ್ಮರಾಯಸ್ವಾಮಿ ದೇವಸ್ಥಾನ, ಗಾಂಧಿ ಸರ್ಕಲ್ ಬಳಿ ಗಣಪತಿ ಮೂರ್ತಿಗಳನ್ನು ವಿರೂಪಗೊಳಿಸಲಾಗಿದೆ.

ಪಟ್ಟಣದ ಮಲ್ಲೇಶ್ (25), ಕಾಂತರಾಜು (30), ಗಿರೀಶ್ (24), ಪುನೀತ್ (25), ಚಂದು (21) ಅವರನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ.

 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು