ಭಾನುವಾರ, 5 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ದಸರಾಗೆ ಒಂದು ಸಾವಿರ ಹೆಚ್ಚುವರಿ ಕೆಎಸ್‌ಆರ್‌ಟಿಸಿ ಬಸ್

Last Updated 7 ಅಕ್ಟೋಬರ್ 2021, 17:47 IST
ಅಕ್ಷರ ಗಾತ್ರ

ಬೆಂಗಳೂರು: ದಸರಾ ಅಂಗವಾಗಿ ರಾಜ್ಯದ ವಿವಿಧೆಡೆ ಸಂಚರಿಸುವ ಪ್ರಯಾಣಿಕರ ಅನುಕೂಲಕ್ಕಾಗಿಕೆಎಸ್‌ಆರ್‌ಟಿಸಿ ಇದೇ 13ರಿಂದ 21ರವರೆಗೆ ಒಂದು ಸಾವಿರ ಹೆಚ್ಚುವರಿ ಬಸ್‌ಗಳನ್ನು ನಿಯೋಜಿಸಿದೆ.

ಧರ್ಮಸ್ಥಳ, ಕುಕ್ಕೆ, ಶಿವಮೊಗ್ಗ, ಹಾಸನ, ಮಂಗಳೂರು, ಕುಂದಾಪುರ, ಶೃಂಗೇರಿ, ಹೊರನಾಡು, ಮೈಸೂರು, ಮಡಿಕೇರಿ, ದಾವಣಗೆರೆ, ಹುಬ್ಬಳ್ಳಿ, ಧಾರವಾಡ, ಬೆಳಗಾವಿ, ವಿಜಯಪುರ, ಗೋಕರ್ಣ, ಶಿರಸಿ, ಕಾರವಾರ, ರಾಯಚೂರು, ಕಲಬುರಗಿ, ಬಳ್ಳಾರಿ, ಕೊಪ್ಪಳ, ಯಾದಗಿರಿ, ಬೀದರ್, ತಿರುಪತಿ, ವಿಜಯವಾಡ, ಹೈದರಾಬಾದ್, ತಿರುವನಂತಪುರ, ಚೆನ್ನೈ, ಕೊಯಮತ್ತೂರು, ಪುಣೆ ಸೇರಿದಂತೆ ವಿವಿಧ ಸ್ಥಳಗಳಿಗೆ ಹೆಚ್ಚುವರಿ ಬಸ್‌ಗಳು ಕಾರ್ಯಾಚರಣೆ ನಡೆಸಲಿವೆ.

ಪ್ರಯಾಣ ದರಗಳಲ್ಲಿ ಯಾವುದೇ ಹೆಚ್ಚಳ ಇರುವುದಿಲ್ಲ. ನಿಗಮದ ವೆಬ್‍ಸೈಟ್ www.ksrtc.karnataka.gov.in ಹಾಗೂ ಕರ್ನಾಟಕ ಮತ್ತು ಅಂತರ ರಾಜ್ಯದಲ್ಲಿರುವ ಗಣಕೀಕೃತ ಬುಕಿಂಗ್ ಕೌಂಟರ್‌ಗಳಲ್ಲಿ ಮುಂಗಡ ಆಸನ ಕಾಯ್ದಿರಿಸುವ ಸೌಲಭ್ಯ ಕಲ್ಪಿಸಲಾಗಿದೆ ಎಂದು ಪ್ರಕಟಣೆ ತಿಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT