ಭಾನುವಾರ, ನವೆಂಬರ್ 29, 2020
25 °C

ಡಾಟಾ ಎಂಟ್ರಿ ಸಹಾಯಕರು: ಕರಡು ನಿಯಮ ಪ್ರಕಟ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ ಸ್ಟೆನೋಗ್ರಾಫರ್ಸ್‌ ಮತ್ತು ಡಾಟಾ ಎಂಟ್ರಿ ಸಹಾಯಕರ ಹುದ್ದೆಗಳಿಗೆ ನೇರ ನೇಮಕಾತಿಗೆ ಅವಕಾಶ ಕಲ್ಪಿಸುವ ಉದ್ದೇಶದಿಂದ ‘ಕರ್ನಾಟಕ ನಾಗರಿಕ ಸೇವೆಗಳು (ಸ್ಟೆನೋಗ್ರಾಫರ್ಸ್‌ ಮತ್ತು ಟೈಪಿಸ್ಟ್‌ ಹುದ್ದೆಗಳಿಗೆ ನೇಮಕಾತಿ) ನಿಯಮ’ಗಳಿಗೆ ತಿದ್ದುಪಡಿ ಮಾಡಿ ರಾಜ್ಯ ಸರ್ಕಾರ ಕರಡು ಪ್ರಕಟಿಸಿದೆ.

ಹಾಲಿ ಇರುವ ‘ಟೈಪಿಸ್ಟ್‌’ ಹುದ್ದೆಗಳನ್ನು ‘ಡಾಟಾ ಎಂಟ್ರಿ ಸಹಾಯಕರು’ ಎಂದು ಮರುನಾಮಕರಣ ಮಾಡಲಾಗಿದೆ. ನಿಗದಿಪಡಿ
ಸಿದ ಅರ್ಹತಾ ಪರೀಕ್ಷೆಯನ್ನು ಪಾಸಾದವರು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು. ನೇಮಕಾತಿ ಪ್ರಾಧಿಕಾರಗಳು ನಡೆಸುವ ಸ್ಪರ್ಧಾತ್ಮಕ ಪರೀಕ್ಷೆ ಪಾಸಾದವರನ್ನು ಮೆರಿಟ್‌ ಆಧಾರದಲ್ಲಿ ಕೌಶಲಪರೀಕ್ಷೆಗೆ ಆಯ್ಕೆ ಮಾಡಲಾಗುವುದು. ಕೌಶಲ ಪರೀಕ್ಷೆಯಲ್ಲಿ ಶೇ 50ಕ್ಕಿಂತ ಹೆಚ್ಚು ಅಂಕ ಪಡೆದವರನ್ನು ಪರಿಗಣಿಸಿ, ಅಂಕಗಳ ಆಧಾರದಲ್ಲಿ ನೇಮಕಾತಿ ಮಾಡಿಕೊಳ್ಳಲಾಗುವುದು ಎಂದಿದೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.