ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಡಿಸಿಎಂ ಅಶ್ವತ್ಥನಾರಾಯಣಗೆ ಕೊರೊನಾ ವೈರಸ್‌ ಸೋಂಕು

Last Updated 19 ಸೆಪ್ಟೆಂಬರ್ 2020, 9:39 IST
ಅಕ್ಷರ ಗಾತ್ರ

ಬೆಂಗಳೂರು: ಡಿಸಿಎಂ ಅಶ್ವತ್ಥನಾರಾಯಣ ಅವರಿಗೆ ಕೋವಿಡ್‌ ಇರುವುದು ದೃಢಪಟ್ಟಿದೆ. ಶನಿವಾರ ಸ್ವತಃ ಅವರೇ ಈ ವಿಷಯ ತಿಳಿಸಿದ್ದಾರೆ.

ತಮಗೆ ಸೋಂಕು ತಗುಲಿರುವ ಕುರಿತು ಟ್ವೀಟ್‌ ಮಾಡಿರುವ ಅವರು, ‘ವಿಧಾನಮಂಡಲದ ಅಧಿವೇಶನ ಪ್ರಾರಂಭವಾಗುವ ಹಿನ್ನೆಲೆಯಲ್ಲಿ ನಾನು ಈ ಶನಿವಾರ ಕೋವಿಡ್ ಪರೀಕ್ಷೆಗೆ ಒಳಪಟ್ಟಿದ್ದ ವೇಳೆ ಸೋಂಕು ದೃಢಪಟ್ಟಿದೆ. ಯಾವುದೇ ರೀತಿಯ ರೋಗ ಲಕ್ಷಣಗಳು ಇಲ್ಲ. ನಾನು ಆರೋಗ್ಯವಾಗಿದ್ದು, ಮನೆಯಲ್ಲಿಯೇ ಪ್ರತ್ಯೇಕವಾಗಿರುತ್ತೇನೆ,’ ಎಂದು ಹೇಳಿದ್ದಾರೆ.

‘ಇತ್ತೀಚೆಗೆ ನನ್ನ ನೇರ ಸಂಪರ್ಕಕ್ಕೆ ಬಂದವರು ಸೂಕ್ತ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳುವಂತೆ ಕೋರುತ್ತೇನೆ,’ ಎಂದೂ ಅವರು ಟ್ವಿಟರ್‌ನಲ್ಲಿ ಮನವಿ ಮಾಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT