ಗುರುವಾರ, 18 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಶೇ 65.14ರಷ್ಟು ಕಾಲೇಜು ವಿದ್ಯಾರ್ಥಿ, ಸಿಬ್ಬಂದಿಗೆ ಲಸಿಕೆ: ಅಶ್ವತ್ಥನಾರಾಯಣ

Last Updated 8 ಜುಲೈ 2021, 15:13 IST
ಅಕ್ಷರ ಗಾತ್ರ

ಬೆಂಗಳೂರು: ‘ರಾಜ್ಯದ ಆರು ಶೈಕ್ಷಣಿಕ ವಲಯಗಳ ಸರ್ಕಾರಿ ಮತ್ತು ಅನುದಾನಿತ ಪದವಿ ಕಾಲೇಜುಗಳಲ್ಲಿ 4.90 ಲಕ್ಷ ವಿದ್ಯಾರ್ಥಿಗಳಿದ್ದು, ಈ ಪೈಕಿ ಈವರೆಗೆ 3.13 ಲಕ್ಷ ಮಂದಿಗೆ ಲಸಿಕೆ ನೀಡಲಾಗಿದೆ. 29,241 ಸಿಬ್ಬಂದಿ ಪೈಕಿ 24,875 ಜನ ಲಸಿಕೆ ಹಾಕಿಸಿಕೊಂಡಿದ್ದಾರೆ. ಈವರೆಗೆ ವಿದ್ಯಾರ್ಥಿಗಳು ಹಾಗೂ ಸಿಬ್ಬಂದಿ ಸೇರಿ ಶೇ 65.14ರಷ್ಟು ಗುರಿ ತಲುಪಲಾಗಿದೆ’ ಎಂದು ಉನ್ನತ ಶಿಕ್ಷಣ ಸಚಿವರೂ ಆದ ಉಪ ಮುಖ್ಯಮಂತ್ರಿ ಡಾ.ಸಿ.ಎನ್.‌ಅಶ್ವತ್ಥನಾರಾಯಣ ಹೇಳಿದರು.

ಡಾ.ಸಿ.ಎನ್.ಅಶ್ವತ್ಥನಾರಾಯಣ ಫೌಂಡೇಷನ್ ಹಾಗೂ ಶೇಷಾದ್ರಿಪುರಂ ಶಿಕ್ಷಣ ಟ್ರಸ್ಟ್‌ ವತಿಯಿಂದ ಮಲ್ಲೇಶ್ವರದ ಮತ್ತಿಕೆರೆಯ 3ನೇ ಮುಖ್ಯರಸ್ತೆಯಲ್ಲಿರುವ ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆಯ ಮಕ್ಕಳಿಗೆ ಗುರುವಾರ ಲ್ಯಾಪ್‌ಟ್ಯಾಪ್‌ ಉಚಿತವಾಗಿ ವಿತರಿಸಿ ಮಾತನಾಡಿದರು.

‘ವಿದ್ಯಾರ್ಥಿಗಳ ಲಸಿಕೀಕರಣವನ್ನು ಮತ್ತಷ್ಟು ಚುರುಕುಗೊಳಿಸಲಾಗಿದೆ. ಉನ್ನತ ಶಿಕ್ಷಣ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಕುಮಾರನಾಯಕ್‌ ಹಾಗೂ ಅಭಿವೃದ್ಧಿ ಆಯುಕ್ತೆ ವಂದಿತಾ ಶರ್ಮ ಅವರು ಎಲ್ಲಾ ಜಿಲ್ಲಾಧಿಕಾರಿಗಳ ಜೊತೆ ಮಾತುಕತೆ ನಡೆಸಿದ್ದಾರೆ. ಸರ್ಕಾರ ಈ ಬಗ್ಗೆ ವಿಶೇಷ ಒತ್ತು ನೀಡಿ ಆದ್ಯತಾ ಗುಂಪಿನ ಅಡಿಯಲ್ಲಿ ವಿದ್ಯಾರ್ಥಿಗಳು, ಬೋಧಕರು ಮತ್ತು ಬೋಧಕೇತರ ಸಿಬ್ಬಂದಿಗೆ ಲಸಿಕೆ ಕೊಡುತ್ತಿದೆ. ಕೆಲ ದಿನಗಳಲ್ಲೇ ಶೇ 100ರಷ್ಟು ಗುರಿ ಸಾಧಿಸಲಾಗುತ್ತದೆ’ ಎಂದರು.

‘ಖಾಸಗಿ ಕಾಲೇಜುಗಳಲ್ಲಿ ಎಷ್ಟು ಪ್ರಮಾಣದಲ್ಲಿ ಲಸಿಕೆ ನೀಡಲಾಗಿದೆ ಎಂಬುದರ ಕುರಿತ ಅಂಕಿ-ಅಂಶ ಪಡೆದುಕೊಳ್ಳುತ್ತಿದ್ದೇವೆ. ಆ ಮಾಹಿತಿ ಸಿಕ್ಕ ಕೂಡಲೇ ಉಳಿದ ವಿದ್ಯಾರ್ಥಿಗಳಿಗೆ ಇನ್ನೆಷ್ಟು ದಿನಗಳಲ್ಲಿ ಲಸಿಕೆ ನೀಡಲಾಗುತ್ತದೆ ಎಂಬುದನ್ನು ನಿರ್ದಿಷ್ಟವಾಗಿ ತಿಳಿಸುತ್ತೇವೆ’ ಎಂದು ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT