ಶುಕ್ರವಾರ, 10 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅಶ್ವತ್ಥನಾರಾಯಣ ಹುಟ್ಟುಹಬ್ಬ ಆಚರಣೆ

Last Updated 2 ಫೆಬ್ರುವರಿ 2021, 18:30 IST
ಅಕ್ಷರ ಗಾತ್ರ

ಬೆಂಗಳೂರು: ಉಪಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥನಾರಾಯಣ ಅವರ ಹುಟ್ಟುಹಬ್ಬದ ಅಂಗವಾಗಿ ಸ್ವಕ್ಷೇತ್ರ ಮಲ್ಲೇಶ್ವರದಲ್ಲಿ ಅವರ ಅಭಿಮಾನಿಗಳು ಕೇಕ್‌ ಕತ್ತರಿಸಿ, ಕುಕ್ಕರ್‌ ಹಾಗೂ ಸಿಹಿ ಹಂಚುವ ಮೂಲಕ ಜನ್ಮದಿನವನ್ನು ಮಂಗಳವಾರ ಆಚರಿಸಿದರು.

ಆದಿಚುಂಚನಗಿರಿ ಮಠದ ನಿರ್ಮಲಾನಂದನಾಥ ಸ್ವಾಮೀಜಿ ಹಾಗೂ ಸುತ್ತೂರು ಮಠದ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ ಅವರು ಅಶ್ವತ್ಥನಾರಾಯಣ ಅವರಿಗೆ ಕರೆ ಮಾಡಿ ಶುಭ ಕೋರಿದರು.

ಕ್ಷೇತ್ರದ ಆರ್‌ಎಂವಿ ಎಕ್ಸ್‌ಟೆನ್ಷನ್‌ ಉದ್ಯಾನದಲ್ಲಿ ಸಸಿ ನೆಡುವ ಮೂಲಕ ಅಶ್ವತ್ಥನಾರಾಯಣ ಅವರು ಹುಟ್ಟುಹಬ್ಬವನ್ನು ವಿಶೇಷವಾಗಿ ಆಚರಿಸಿಕೊಂಡರು.ಮತ್ತಿಕೆರೆಯ ದುರ್ಗಾ ಪರಮೇಶ್ವರಿ ದೇವಾಲಯಕ್ಕೆ ತೆರಳಿ ಪೂಜೆ ಸಲ್ಲಿಸಿದರು. ಬಳಿಕ ಮಲ್ಲೇಶ್ವರದಲ್ಲಿ ಅಂಗನವಾಡಿ ಕೇಂದ್ರ ಉದ್ಘಾಟಿಸಿದರು.

ಗುಟ್ಟಹಳ್ಳಿಯ ರಾಮದೇವರ ಉದ್ಯಾನ, ಮಲ್ಲೇಶ್ವರದ ಮಿಲ್ಕ್‌ ಕಾಲೊನಿಯಲ್ಲಿ ಕಾರ್ಯಕರ್ತರ ಜೊತೆ ಕೇಕ್‌ ಕತ್ತರಿಸಿದರು. ಈ ವೇಳೆ ಅಬಕಾರಿ ಸಚಿವ ಕೆ.ಗೋಪಾಲಯ್ಯ ಶುಭ ಕೋರಿದರು. ಬಿಜೆಪಿ ಕಾರ್ಯಕರ್ತರು ಹಾಗೂ ಅಭಿಮಾನಿಗಳು 52 ಕೆ.ಜಿ.ತೂಕದ ಕೇಕ್‌ ಕತ್ತರಿಸಿ ಸಂಭ್ರಮಿಸಿದರು. ಇದೇ ವೇಳೆ ಐದು ಸಾವಿರ ಕುಕ್ಕರ್‌ ಹಾಗೂ ಲಾಡುಗಳನ್ನು ವಿತರಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT