ಶುಕ್ರವಾರ, ಅಕ್ಟೋಬರ್ 23, 2020
21 °C

ಕೋವಿಡ್‌: ಡಿಸಿಎಂ ಗೋವಿಂದ ಕಾರಜೋಳ ಪುತ್ರನ ಸ್ಥಿತಿ ಗಂಭೀರ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಉಪಮುಖ್ಯಮಂತ್ರಿಯೂ ಆಗಿರುವ ಲೋಕೋಪಯೋಗಿ ಸಚಿವ ಗೋವಿಂದ ಕಾರಜೋಳ ಅವರ ಪುತ್ರ, ಕೋವಿಡ್‌ನಿಂದ ಬಳಲುತ್ತಿರುವ ಡಾ. ಗೋಪಾಲ್ ಕಾರಜೋಳ ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಭಾನುವಾರ ಮಧ್ಯಾಹ್ನ ಹೈದರಾಬಾದ್‌ನ ಕಿಮ್ಸ್‌ ಆಸ್ಪತ್ರೆಗೆ ಕರೆದೊಯ್ಯಲಾಗಿದೆ.

ಕೋವಿಡ್‌ ದೃಢಪಟ್ಟ ಕಾರಣ ಗೋಪಾಲ್‌ ಅವರನ್ನು ಮಣಿಪಾಲ ಆಸ್ಪತ್ರೆಯಲ್ಲಿ ದಾಖಲಿಸಲಾಗಿತ್ತು. ಕಳೆದ 24 ದಿನಗಳಿಂದ ವೆಂಟಿಲೇಟ್‌ರ್‌ನಲ್ಲಿದ್ದ ಅವರ ಆರೋಗ್ಯ ಸ್ಥಿತಿ ಮತ್ತಷ್ಟು ಬಿಗಡಾಯಿಸಿದೆ. ಹೀಗಾಗಿ, ವೈದ್ಯರ ಸಲಹೆಯಂತೆ ಚೆನ್ನೈನ ಆಸ್ಪತ್ರೆಗೆ ಕರೆದೊಯ್ಯಲು ಮೊದಲು ತೀರ್ಮಾನಿಸಲಾಗಿತ್ತು. ಬಳಿಕ, ಹೈದರಾಬಾದ್‌ಗೆ ಕರೆದುಕೊಂಡು ಹೋಗಲು ತೀರ್ಮಾನಿಸಲಾಯಿತು ಎಂದು ಗೊತ್ತಾಗಿದೆ.

ಕಳೆದ ವಿಧಾನಸಭೆ ಚುನಾವಣೆಯಲ್ಲಿ ನಾಗಠಾಣಾ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಅವರು ಕಣಕ್ಕಿಳಿದಿದ್ದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು