ಬುಧವಾರ, ಏಪ್ರಿಲ್ 14, 2021
31 °C

ಆಕ್ಟಿವಾ ಸ್ಕೂಟರ್ ನಲ್ಲಿ ಬಂದು ಮರಳು ಲಾರಿ ಹಿಡಿದ ಕಮೀಷನರ್ - ಡಿಸಿಪಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಮಂಗಳೂರು: ಕೇರಳಕ್ಕೆ ಅಕ್ರಮವಾಗಿ ಮರಳು ಸಾಗಿಸುತ್ತಿದ್ದ ಲಾರಿಯನ್ನು ನಗರ ಪೊಲೀಸ್ ಕಮೀಷನರ್ ಶಶಿಕುಮಾರ್ ಮತ್ತು ಡಿಸಿಪಿ ಹರಿರಾಮ್ ಅವರು ಸ್ಕೂಟರ್ ನಲ್ಲಿ ಬಂದು ವಶಕ್ಕೆ ಪಡೆದಿದ್ದಾರೆ. 

ಮರಳು ಸಾಗಾಟದ ಲಾರಿಯನ್ನು ತಲಪಾಡಿ ಟೋಲ್ ಗೇಟಿನಲ್ಲಿ ಅಡ್ಡ ಹಾಕಿದ ಅಧಿಕಾರಿಗಳು, ಲಾರಿ ಚಾಲಕನನ್ನು ವಶಕ್ಕೆ ಪಡೆದರು.
ಸೋಮೇಶ್ವರ ಸಮುದ್ರ ತೀರದಿಂದ ಮರಳು ಸಾಗಾಟ ನಡೆಸುತ್ತಿದ್ದ  ಲಾರಿಗೆ ಎಸ್ಕಾರ್ಟ್ ನೀಡುತ್ತಿದ್ದ ವಾಹನಗಳನ್ನು ಜಪ್ತಿ ಮಾಡಿದ್ದು, ಎಸ್ಕಾರ್ಟ್ ನಡೆಸುತ್ತಿದ್ದ ಚಂದ್ರ ಎಂಬುವನನ್ನು ವಶಕ್ಕೆ ಪಡೆದಿದ್ದಾರೆ.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು