ಶನಿವಾರ, ಏಪ್ರಿಲ್ 1, 2023
23 °C

ಅಂಗನವಾಡಿಗಳಿಗೆ ವಿದ್ಯುತ್ ಸಂಪರ್ಕ ಒದಗಿಸಲು ಗಡುವು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೆಂಗಳೂರು: ರಾಜ್ಯ ಅಂಗನವಾಡಿಗಳಿಗೆ ಡಿ.31ರೊಳಗೆ ವಿದ್ಯುತ್ ಸಂಪರ್ಕ ಕಲ್ಪಿಸಬೇಕು ಮತ್ತು ಫ್ಯಾನ್‌ಗಳನ್ನು ಅಳವಡಿಸಬೇಕು ಎಂದು ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ನಿರ್ದೇಶನ ನೀಡಿದೆ.

ಅಂಗನವಾಡಿಗಳಿಗೆ ಮೂಲ ಸೌಕರ್ಯ ಒದಗಿಸುವ ಸಂಬಂಧ ಸ್ವಯಂ ಪ್ರೇರಿತ ಅರ್ಜಿ ವಿಚಾರಣೆ ಕೈಗೆತ್ತಿಕೊಂಡಿರುವ ಮುಖ್ಯ ನ್ಯಾಯಮೂರ್ತಿ ಎ.ಎಸ್. ಓಕಾ ನೇತೃತ್ವದ ವಿಭಾಗೀಯ ಪೀಠ, ‘ರಾಜ್ಯದ 14,948 ಅಂಗನವಾಡಿಗಳಿಗೆ ವಿದ್ಯುತ್ ಸಂಪರ್ಕ ಮತ್ತು 18,974 ಕೇಂದ್ರಗಳಿಗೆ ಫ್ಯಾನ್‌ಗಳನ್ನು ಒದಗಿಸಬೇಕಿದೆ. ಇದರಲ್ಲಿ 3,524 ಕೇಂದ್ರಗಳು ಸರ್ಕಾರಿ ಕಟ್ಟಡದಲ್ಲಿ ಇರುವುದರಿಂದ ಯಾವುದೇ ತೊಡಕು ಬರುವುದಿಲ್ಲ. ಅವುಗಳಿಗೆ ಡಿಸೆಂಬರ್ ಒಳಗೆ, ಉಳಿದವುಗಳಿಗೆ 2022ರ ಜೂನ್ 30ರೊಳಗೆ ಈ ಸೌಕರ್ಯ ಕಲ್ಪಿಸಬೇಕು’ ಎಂದು ತಿಳಿಸಿತು.

ಹೈಕೋರ್ಟ್ ನಿವೃತ್ತ ನ್ಯಾಯಮೂರ್ತಿ ಎ.ಎನ್.ವೇಣುಗೋಪಾಲ ಗೌಡ ನೇತೃತ್ವದ ಸಮಿತಿ ನಡೆಸಿದ ಅವಲೋಕನಗಳನ್ನು ಗಮನಿಸಿದರೆ ರಾಜ್ಯದ ಅಂಗನವಾಡಿ ಕೇಂದ್ರಗಳ ಸ್ಥಿತಿ ತೃಪ್ತಿಕರವಾಗಿಲ್ಲ ಎಂದು ತೋರುತ್ತದೆ. ಅಂಗನವಾಡಿ ಕಾರ್ಯಕರ್ತೆಯರ 1,448 ಹುದ್ದೆ, ಸಹಾಯಕರ  2,188 ಹುದ್ದೆಗಳು ಖಾಲಿ ಇವೆ ಎಂದು ಅಸಮಾಧಾನ ವ್ಯಕ್ತಪಡಿಸಿತು.

‘33,164 ಅಂಗನವಾಡಿಗಳಿಗೆ ಮಾತ್ರ ವಿದ್ಯುತ್ ಸಂಪರ್ಕ, 26,560 ಅಂಗನವಾಡಿಗಳಿಗೆ ಫ್ಯಾನ್‌ಗಳನ್ನು ಪೂರೈಸಲಾಗಿದೆ. 44,225 ಕೇಂದ್ರಗಳಲ್ಲಿ ಶೌಚಾಲಯ ಇದೆ’ ಎಂದು ಹಿಂದಿನ ವಿಚಾರಣೆ ವೇಳೆ ಸರ್ಕಾರ ಮಾಹಿತಿ ನೀಡಿತ್ತು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು