ಸೋಮವಾರ, ಸೆಪ್ಟೆಂಬರ್ 20, 2021
22 °C

ಸರ್ಕಾರಿ ನೌಕರರ ತುಟ್ಟಿಭತ್ಯೆ ಶೇ 10.25ರಷ್ಟು ಹೆಚ್ಚಿಸಿ ಆದೇಶ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಇದೇ ಜುಲೈ 1ರಿಂದ ಅನ್ವಯವಾಗುವಂತೆ ರಾಜ್ಯ ಸರ್ಕಾರಿ ನೌಕರರಿಗೆ ಮೂಲವೇತನದ ಶೇ 10.25ರಷ್ಟು ತುಟ್ಟಿಭತ್ಯೆ ಹೆಚ್ಚಿಸಿ ಸರ್ಕಾರ ಆದೇಶ ಹೊರಡಿಸಿದೆ. ಸದ್ಯ ಶೇ 11.25ರಷ್ಟಿದ್ದು, ಈ ಹೆಚ್ಚಳದಿಂದ ಒಟ್ಟು ಶೇ 21.50ರಷ್ಟು ತುಟ್ಟಿಭತ್ಯೆ ಸಿಗಲಿದೆ.

ಕೋವಿಡ್ ಕಾರಣಕ್ಕೆ 2020ರ ಜನವರಿ, ಜುಲೈ ಮತ್ತು 2021ರ ಜನವರಿಯಲ್ಲಿ ನೀಡಬೇಕಾಗಿದ್ದ ಮೂರು ತುಟ್ಟಿಭತ್ಯೆಗಳನ್ನು ಸರ್ಕಾರ ತಡೆ ಹಿಡಿದಿತ್ತು. ಈ ಹೆಚ್ಚುವರಿ ತುಟ್ಟಿಭತ್ಯೆ ಕಂತುಗಳನ್ನು ಸೇರಿಸಿ ಸರ್ಕಾರ ಆದೇಶ ಮಾಡಿದೆ. ಇದರಿಂದಾಗಿ ಆರು ಲಕ್ಷ ನೌಕರರು, 4.50 ಲಕ್ಷ ಪಿಂಚಣಿದಾರರು ಹಾಗೂ ನಿಗಮ– ಮಂಡಳಿಗಳ 3 ಲಕ್ಷ ನೌಕರರಿಗೆ ಅನುಕೂಲವಾಗಲಿದೆ.

ಕೇಂದ್ರ ಸರ್ಕಾರ ತನ್ನ ನೌಕರರಿಗೆ ಶೇ 11ರಷ್ಟು ತುಟ್ಟಿಭತ್ಯೆ ಹೆಚ್ಚಿಸಿ ಜುಲೈ 20ರಂದು ಆದೇಶ ಹೊರಡಿಸಿತ್ತು. ಆ ಬೆನ್ನಲ್ಲೇ, ಮುಖ್ಯಮಂತ್ರಿಯನ್ನು ಭೇಟಿ ಮಾಡಿದ್ದ ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿ.ಎಸ್. ಷಡಕ್ಷರಿ ನೇತೃತ್ವದ ನಿಯೋಗ, ರಾಜ್ಯ ಸರ್ಕಾರಿ ನೌಕರರ ತುಟ್ಟಿಭತ್ಯೆಯನ್ನೂ ಹೆಚ್ಚಿಸುವಂತೆ ಮನವಿ ಮಾಡಿತ್ತು. ಈ ಮನವಿಯನ್ನು ಮುಖ್ಯಮಂತ್ರಿಯಾಗಿದ್ದ ಬಿ.ಎಸ್‌. ಯಡಿಯೂರಪ್ಪ ಅನುಮೋದಿಸಿ, ಕೂಡಲೇ ಜಾರಿ ಮಾಡುವಂತೆ ಆರ್ಥಿಕ ಇಲಾಖೆಗೆ ಸೂಚನೆ ನೀಡಿದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು