ಗುರುವಾರ, 25 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಚಾರುಕೀರ್ತಿ ಭಟ್ಟಾರಕ ಸ್ವಾಮೀಜಿ ನಿಧನ: ಸಂಜೆ ಅಂತಿಮ ವಿಧಿವಿಧಾನ

Last Updated 23 ಮಾರ್ಚ್ 2023, 5:31 IST
ಅಕ್ಷರ ಗಾತ್ರ

ಹಾಸನ: ಶ್ರವಣಬೆಳಗೊಳದ ಜೈನಮಠದ ಚಾವುಂಡರಾಯ ಸಭಾಮಂಟಪದಲ್ಲಿ ಮಧ್ಯಾಹ್ನ 12.30ರಿಂದ ಶ್ರೀಗಳ ಪಾರ್ಥಿವ ಶರೀರದ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ಸಂಜೆ 4.30ರ ನಂತರ ಮೆರವಣಿಗೆ ನಡೆಯಲಿದೆ. ನಂತರ ಶ್ರವಣಬೆಳಗೊಳದ ಚಂದ್ರಗಿರಿಯ ಚಿಕ್ಕಬೆಟ್ಟಕ್ಕೆ ಹೊಂದಿಕೊಂಡಿರುವ ತಾವರೆಕಟ್ಟೆಯ ಬೋಳುಬೆಟ್ಟದಲ್ಲಿ ಅಂತಿಮ ವಿಧಿವಿಧಾನಗಳು ನೆರವೇರಲಿವೆ ಎಂದು ಮಠದ ಮೂಲಗಳು ತಿಳಿಸಿವೆ.

ಶ್ರವಣಬೆಳಗೊಳದ ಕರ್ಮಯೋಗಿ ಸ್ವಸ್ತಿಶ್ರೀ ಚಾರುಕೀರ್ತಿ ಭಟ್ಟಾರಕ ಸ್ವಾಮೀಜಿಯವರ ಅಂತ್ಯಸಂಸ್ಕಾರವನ್ನು ಜೈನ ಸಂಪ್ರದಾಯದಂತೆ ಸಕಲ ಸರ್ಕಾರಿ ಗೌರವಗಳೊಂದಿಗೆ ನೆರವೇರಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT