ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೋವಿಡ್‌ನಿಂದ ಉಪನ್ಯಾಸಕರ ಸಾವು: ಪರಿಹಾರಕ್ಕೆ ಒತ್ತಾಯ

Last Updated 17 ಅಕ್ಟೋಬರ್ 2020, 20:28 IST
ಅಕ್ಷರ ಗಾತ್ರ

ಬೆಂಗಳೂರು: ಕೋವಿಡ್‌ನಿಂದ ಮೃತಪಟ್ಟಿರುವ ಉಪನ್ಯಾಸಕರ ಕುಟುಂಬಕ್ಕೆ ಸರ್ಕಾರ ₹30 ಲಕ್ಷ ಪರಿಹಾರ ಘೋಷಿಸಬೇಕು ಎಂದು ರಾಜ್ಯ ಪದವಿಪೂರ್ವ ಕಾಲೇಜುಗಳ ಉಪನ್ಯಾಸಕರ ಸಂಘ ಒತ್ತಾಯಿಸಿದೆ.

‘ಪೂರಕ ಪರೀಕ್ಷೆಯ ಮೌಲ್ಯಮಾಪನ ಕಾರ್ಯದಲ್ಲಿ ಪಾಲ್ಗೊಂಡಿದ್ದ ವೇಳೆ ಅರಸೀಕೆರೆ ಪ್ರತಿಭಾ ಕಾಲೇಜಿನ ಅರ್ಥಶಾಸ್ತ್ರ ಉಪನ್ಯಾಸಕ, ಮಂಡ್ಯ ಜಿಲ್ಲೆಯ ಬಸರಾಳು ಪಿಯು ಕಾಲೇಜಿನ ಇತಿಹಾಸ ಉಪನ್ಯಾಸಕ ಸೇರಿದಂತೆ ಹಲವರು ಕೋವಿಡ್‌ನಿಂದ ಮೃತಪಟ್ಟಿದ್ದಾರೆ. ಇವರನ್ನು ಕೊರೊನಾ ಸೇನಾನಿಗಳು ಎಂದು ಪರಿಗಣಿಸಿ ಸರ್ಕಾರ ಪರಿಹಾರ ನೀಡಬೇಕು’ ಎಂದು ಸಂಘದ ಅಧ್ಯಕ್ಷ ಎ.ಎಚ್. ನಿಂಗೇಗೌಡ ಒತ್ತಾಯಿಸಿದ್ದಾರೆ.

‘ಪೂರಕ ಪರೀಕ್ಷೆಯ ಉತ್ತರಪತ್ರಿಕೆಗಳ ಮೌಲ್ಯಮಾಪನ ಕೇಂದ್ರಗಳನ್ನು ವಲಯವಾರು ವಿಕೇಂದ್ರೀಕರಣಗೊಳಿಸುವಂತೆ ಒತ್ತಾಯಿಸಿದ್ದೆವು. ಆದರೆ, ಬೆಂಗಳೂರಿನಲ್ಲಿ ಮಾತ್ರ ಕೇಂದ್ರಗಳನ್ನು ತೆರೆಯಲಾಯಿತು. ರಾಜ್ಯದ ಬೇರೆ ಜಿಲ್ಲೆಗಳಿಂದ ಕೇಂದ್ರಕ್ಕೆ ಬಂದಿದ್ದರಿಂದ, ಬಹಳಷ್ಟು ಉಪನ್ಯಾಸಕರಿಗೆ ಸೋಂಕು ತಗುಲಿತು’ ಎಂದು ಅವರು ಹೇಳಿದರು.

‘ಸೋಂಕಿಗೆ ತುತ್ತಾಗಿ ಈಗ ಚಿಕಿತ್ಸೆ ಪಡೆಯುತ್ತಿರುವ ಉಪನ್ಯಾಸಕರ ಚಿಕಿತ್ಸಾ ವೆಚ್ಚವನ್ನೂ ಸರ್ಕಾರ ಭರಿಸಬೇಕು’ ಎಂದು ಅವರು ಒತ್ತಾಯಿಸಿದರು.

ನೇಮಕಾತಿ ಆದೇಶ ನೀಡಿ: ‘ರಾಜ್ಯದ ‘ಸಿ’ ವಲಯಗಳಲ್ಲಿ ಉಪನ್ಯಾಸಕರ ಕೊರತೆಯಿಂದ ಕಾಲೇಜುಗಳು ಮುಚ್ಚುತ್ತಿವೆ. ಈಗಾಗಲೇ ನೇಮಕಗೊಂಡಿರುವ 1,203 ಉಪನ್ಯಾಸಕರಿಗೆ ನೇಮಕಾತಿ ಆದೇಶ ನೀಡಬೇಕು’ ಎಂದು ವಿಧಾನ ಪರಿಷತ್‌ ಸದಸ್ಯ ಕೆ.ಟಿ. ಶ್ರೀಕಂಠೇಗೌಡ ಒತ್ತಾಯಿಸಿದ್ದಾರೆ.

ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಇಲಾಖೆಯ ಪ್ರಧಾನ ಕಾರ್ಯದರ್ಶಿಗೆ ಪತ್ರ ಬರೆದಿರುವ ಅವರು, ‘ಕಲ್ಯಾಣ ಕರ್ನಾಟಕದ ಭಾಗದಲ್ಲಿ ಶೇ 40ರಷ್ಟು ಉಪನ್ಯಾಸಕರ ಕೊರತೆ ಇದೆ. ಇರುವ ಉಪನ್ಯಾಸಕರನ್ನು ಮೌಲ್ಯಮಾಪನಕ್ಕೆ, ಕೋವಿಡ್‌ ಕರ್ತವ್ಯಕ್ಕೆ ಬಳಸಿಕೊಳ್ಳಲಾಗುತ್ತಿದೆ. ಯೂಟ್ಯೂಬ್ ಮೂಲಕ ವಿದ್ಯಾರ್ಥಿಗಳಿಗೆ ಪಾಠ ಮಾಡಬೇಕಾಗಿದೆ. ಹೊಸದಾಗಿ ನೇಮಕಗೊಂಡಿರುವವರಿಗೆ ನೇಮಕಾತಿ ಆದೇಶ ನೀಡಿದರೆ ಅನುಕೂಲವಾಗುತ್ತದೆ’ ಎಂದು ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT