ಶುಕ್ರವಾರ, ನವೆಂಬರ್ 27, 2020
17 °C

ಕೋವಿಡ್: 11ಸಾವಿರ ದಾಟಿದ ಮೃತರ ಸಂಖ್ಯೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಕೋವಿಡ್ ಪೀಡಿತರಲ್ಲಿ ಬೆಂಗಳೂರಿನಲ್ಲಿ 23 ಮಂದಿ ಸೇರಿ ದಂತೆ ರಾಜ್ಯದಲ್ಲಿ 55 ಮಂದಿ ಮೃತಪಟ್ಟಿರು
ವುದು ಬುಧವಾರ ದೃಢಪಟ್ಟಿದೆ. ಇದ ರಿಂದ ಸೋಂಕಿನಿಂದ ಸಾವಿಗೀಡಾ ದವರ ಒಟ್ಟು ಸಂಖ್ಯೆ 11 ಸಾವಿರ ದಾಟಿದೆ.

ಕೆಲ ದಿನಗಳಿಂದ ಕೋವಿಡ್‌ ಕಾಯಿಲೆಗೆ ಮೃತಪಡುವವರ ಸಂಖ್ಯೆ ಯಲ್ಲಿ ಕೂಡ ಇಳಿಕೆ ಕಂಡಿದ್ದು, 10 ದಿನ ಗಳಲ್ಲಿ 568 ಮಂದಿ ಸಾವಿಗೀಡಾಗಿರುವುದು ದೃಢಪಟ್ಟಿದೆ.

ಈ ಅವಧಿಯಲ್ಲಿ ಪ್ರತಿನಿತ್ಯ ಸರಾಸರಿ 56 ಮಂದಿ ಮೃತಪಟ್ಟಿದ್ದಾರೆ. ರಾಜ್ಯದಲ್ಲಿ ಹೊಸದಾಗಿ 3,146 ಕೋವಿಡ್ ಪ್ರಕರಣಗಳು ವರದಿಯಾಗಿದ್ದು, ಒಟ್ಟು ಸೋಂಕಿತರ ಸಂಖ್ಯೆ 8.12 ಲಕ್ಷ ದಾಟಿದೆ.

ಕೋವಿಡ್ ಪೀಡಿತರಲ್ಲಿ ಬೆಂಗಳೂ ರಿನಲ್ಲಿ 4,457 ಮಂದಿ ಸೇರಿದಂತೆ ರಾಜ್ಯದಲ್ಲಿ 7,384 ಮಂದಿಗೆ ಕಾಯಿಲೆ ವಾಸಿಯಾಗಿದೆ. ಇದರಿಂದಾಗಿ ಗುಣ ಮುಖರ ಸಂಖ್ಯೆ 7.33  ಲಕ್ಷ ದಾಟಿದೆ. ಸಕ್ರಿಯ ಪ್ರಕರಣಗಳು ಮತ್ತಷ್ಟು ಇಳಿಕೆ ಕಂಡಿದ್ದು, ಸದ್ಯ 68,161 ಮಂದಿ ಸೋಂಕಿತರು ಆಸ್ಪತ್ರೆ ಸೇರಿದಂತೆವಿವಿಧೆಡೆ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ.

ಇವರಲ್ಲಿ 939 ಮಂದಿ ತೀವ್ರ ನಿಗಾ ಘಟಕದಲ್ಲಿದ್ದಾರೆ.

ಬೆಂಗಳೂರಿನಲ್ಲಿ 1,612 ಮಂದಿ ಕೋವಿಡ್ ಪೀಡಿತರಾಗಿದ್ದು, ಸೋಂಕಿತರ ಸಂಖ್ಯೆ 3.30 ಲಕ್ಷ ದಾಟಿದೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು