ಭಾನುವಾರ, ಆಗಸ್ಟ್ 14, 2022
26 °C

ಡಿ.5ರ ಬಂದ್ ವೇಳೆ ಅಗತ್ಯ ಸೇವೆಗಳಲ್ಲಿ ವ್ಯತ್ಯಯ ಇಲ್ಲ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ‘ಮರಾಠಾ ಅಭಿವೃದ್ಧಿ ನಿಗಮ ರಚನೆ ಮತ್ತು ಶಾಸಕರ ಕನ್ನಡದ್ರೋಹಿ ನಡೆಗಳನ್ನು ವಿರೋಧಿಸಿ ಡಿ.5
ರಂದು ಕರೆ ನೀಡಲಾಗಿರುವ ‘ಕರ್ನಾಟಕ ಬಂದ್’ ವೇಳೆ ಅಗತ್ಯ ಸೇವೆಗಳ ಪೂರೈಕೆಯಲ್ಲಿ ಯಾವುದೇ ವ್ಯತ್ಯಯ ಇರುವು
ದಿಲ್ಲ. ನಾಗರಿಕರು ಮನೆಯಲ್ಲೇ ಉಳಿದುಬಂದ್‍ಗೆ ಬೆಂಬಲಿಸಬೇಕು' ಎಂದು ಕರ್ನಾಟಕ ರಕ್ಷಣಾ ವೇದಿಕೆ ರಾಜ್ಯ ಘಟಕದ ಅಧ್ಯಕ್ಷ ಟಿ.ಎ.ನಾರಾಯಣಗೌಡ ಮನವಿ ಮಾಡಿದರು.

ಮಂಗಳವಾರ ಇಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಬಂದ್ ದಿನದಂದು ವೇದಿಕೆಯ ಕಾರ್ಯಕರ್ತರು ಎಲ್ಲ ಜಿಲ್ಲಾಧಿಕಾರಿ ಕಚೇರಿಗಳು, ತಹಶೀಲ್ದಾರ್ ಕಚೇರಿಗಳಿಗೆ ಮುತ್ತಿಗೆ ಹಾಕಿ ಪ್ರತಿಭಟಿಸಲಿದ್ದಾರೆ. ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ನಿವಾಸಕ್ಕೆ ಮುತ್ತಿಗೆ ಹಾಕುವ ಮೂಲಕ ಪ್ರತಿಭಟನೆ ನಡೆಸಲಿದ್ದೇವೆ’ ಎಂದರು.

‘ಆಳುವ ಪಕ್ಷದ ಕನ್ನಡದ್ರೋಹಿ ಶಾಸಕರು ‘ನಮಗೆ ಕನ್ನಡಿಗರ ಮತ ಬೇಕಿಲ್ಲ’ ಎಂಬ ಉದ್ಧಟತನದ ಹೇಳಿಕೆಗಳ ಮೂಲಕ ಕನ್ನಡಪರ ಸಂಘಟನೆಗಳನ್ನು ದೂಷಿಸುತ್ತಿದ್ದಾರೆ. ಆದರೂ ಸರ್ಕಾರ ಈ ಬಗ್ಗೆ ಮೌನ ವಹಿಸಿರುವುದು ನಮ್ಮ ಆಕ್ರೋಶಕ್ಕೆ ಕಾರಣವಾಗಿದೆ.ಇಂಥ ಧೋರಣೆ ಹಾಗೂ ನಿಗಮ ಸ್ಥಾಪನೆ ವಿರೋಧಿಸಲು ಬಂದ್ ಅನಿವಾರ್ಯ’ ಎಂದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು