ಸೋಮವಾರ, ಅಕ್ಟೋಬರ್ 26, 2020
23 °C

ಹಂಪಿ ಉತ್ಸವದ ಬಗ್ಗೆ ಇನ್ನಷ್ಟೇ ತೀರ್ಮಾನ ಮಾಡಬೇಕಿದೆ: ಆನಂದ್‌ ಸಿಂಗ್‌

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಹೊಸಪೇಟೆ: ‘ಹಂಪಿ ಉತ್ಸವ ನಡೆಸಬೇಕೇ ಅಥವಾ ಬೇಡವೇ ಎನ್ನುವುದರ ಬಗ್ಗೆ ಜಿಲ್ಲಾಧಿಕಾರಿ ಜತೆ ಚರ್ಚಿಸಿದ ನಂತರವಷ್ಟೇ ತೀರ್ಮಾನಕ್ಕೆ ಬರಲಾಗುವುದು’ ಎಂದು ಅರಣ್ಯ ಸಚಿವ ಆನಂದ್‌ ಸಿಂಗ್‌ ತಿಳಿಸಿದರು.

‘ಮೈಸೂರು ದಸರಾ ಆಚರಿಸಲಾಗುತ್ತಿದೆ. ಹೀಗಿರುವಾಗ ಹಂಪಿ ಉತ್ಸವವೇಕೇ ಮಾಡಬಾರದು ಎಂಬ ಪ್ರಶ್ನೆಗಳನ್ನು ಕೆಲವರು ಕೇಳಿದ್ದಾರೆ.

ಅಲ್ಲದೇ ಕೊರೊನಾ ಸೋಂಕು ಹರಡುತ್ತಿರುವುದರಿಂದ ಅದ್ದೂರಿ ಉತ್ಸವ ಮಾಡಲು ಬರುವುದಿಲ್ಲ. ಒಂದುವೇಳೆ ಉತ್ಸವ ಮಾಡುವುದರ ಬಗ್ಗೆ ತೀರ್ಮಾನಕ್ಕೆ ಬಂದರೆ ಸರಳ ರೀತಿಯಲ್ಲಿ ಆಚರಿಸಲಾಗುವುದು’ ಎಂದು ಶುಕ್ರವಾರ ಸಂಜೆ ನಗರದಲ್ಲಿ ಸುದ್ದಿಗಾರರಿಗೆ ತಿಳಿಸಿದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು