ಶನಿವಾರ, ಸೆಪ್ಟೆಂಬರ್ 25, 2021
29 °C
ರಾಜ್ಯಕ್ಕೆ ಶೀಘ್ರ ವೀಕ್ಷಕರ ಭೇಟಿ: ಅರುಣ್ ಸಿಂಗ್

ಮುಂದಿನ ಮುಖ್ಯಮಂತ್ರಿ ಕುರಿತು ಸಂಸದೀಯ ಮಂಡಳಿ ಸಭೆಯಲ್ಲಿ ನಿರ್ಧಾರ: ಅರುಣ್‌ ಸಿಂಗ್‌

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ನವದೆಹಲಿ: ಬಿಜೆಪಿ ಸಂಸದೀಯ ಮಂಡಳಿ ಸಭೆಯಲ್ಲಿ ರಾಜ್ಯದ ಮುಂದಿ‌ನ ಮುಖ್ಯಮಂತ್ರಿ ಕುರಿತು ನಿರ್ಧಾರ ಆಗಲಿದೆ ಎಂದು ಪಕ್ಷದ ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಹೇಳಿದರು.

ತಮ್ಮ ನಿವಾಸದ ಬಳಿ ಸೋಮವಾರ ಮಧ್ಯಾಹ್ನ  ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಭೆಯ  ನಂತರ ವರಿಷ್ಠರು ಈ ಸಂಬಂಧ ನಿರ್ಧಾರ ಕೈಗೊಳ್ಳುವರು ಎಂದರು.

'ಸಂಸದೀಯ ಮಂಡಳಿ ಸಭೆಯ ನಂತರ ಪಕ್ಷದ‌ ವೀಕ್ಷಕರು ಬೆಂಗಳೂರಿಗೆ ತೆರಳಲಿದ್ದಾರೆ. ಶಾಸಕರು ಮತ್ತು ಮುಖಂಡರೊಂದಿಗೆ ಸಮಾಲೋಚನೆ ನಡೆಸಿ ಕೇಂದ್ರಕ್ಕೆ ವರದಿ ಸಲ್ಲಿಸಲಿದ್ದಾರೆ. ನಾನೂ ವೀಕ್ಷಕರೊಂದಿಗೆ ತೆರಳುವೆ' ಎಂದು ಅವರು ತಿಳಿಸಿದರು.

'ಮುಂದಿನ ಮುಖ್ಯಮಂತ್ರಿ ಯಾರಾಗಲಿದ್ದಾರೆ ಎಂಬ ನಿರ್ಧಾರ ಆಗಿದೆಯೇ?' ಎಂಬ ಪ್ರಶ್ನೆಗೆ ಪ್ರತಿಕ್ರಿಯೆ ನೀಡಲು ನಿರಾಕರಿಸಿದ ಅವರು, ಕೈಮುಗಿದು ಹೋದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು