ಬೆಂಗಳೂರು: ರಾಜ್ಯದಲ್ಲಿ ಶಾಲೆಗಳು ಮತ್ತು ಪದವಿಪೂರ್ವ ಕಾಲೇಜುಗಳನ್ನು ಪುನರಾರಂಭಿಸುವ ಕುರಿತು ಶಿಕ್ಷಣ ಇಲಾಖೆ ಸಿದ್ಧತೆ ನಡೆಸುತ್ತಿದ್ದು, ಸಂಬಂಧ ಪಟ್ಟವರೊಂದಿಗೆ ಈ ಕುರಿತು ಸಭೆ ನಡೆಸಲು ಮುಂದಾಗಿದೆ.

ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್. ಸುರೇಶ್‌ಕುಮಾರ್ ನ.4ರಿಂದ 6ರವರೆಗೆ ಪೋಷಕರು ಮತ್ತು ಸಾರ್ವಜನಿಕ ಶಿಕ್ಷಣ ಇಲಾಖೆಯ ಎಲ್ಲ ಉಪನಿರ್ದೇಶಕರ ಜತೆಗೆ ಸರಣಿ ಸಭೆ ನಡೆಸಲಿದ್ದಾರೆ.

‘ಶಾಲೆಗಳನ್ನು ಪುನರಾರಂಭಿಸುವು ದಕ್ಕೆ ಸಂಬಂಧಿಸಿದಂತೆ ಅಧಿಕಾರಿಗಳೊಂದಿಗೆ ಸಚಿವರು ಸಭೆ ನಡೆಸಲಿದ್ದಾರೆ. ಇದರೊಂದಿಗೆ ಶಾಲಾ ಕಟ್ಟಡ ಹಾಗೂ ಕೋಣೆಗಳ ದುರಸ್ತಿ, ಶೌಚಾಲಯ, ಕುಡಿಯುವ ನೀರಿನ ವ್ಯವಸ್ಥೆ ಮತ್ತಿತರ ಸಿದ್ಧತೆಗಳ ಬಗ್ಗೆಯೂ ಕ್ಷೇತ್ರ ಶಿಕ್ಷಣಾಧಿಕಾರಿಗಳಿಂದ ಮಾಹಿತಿ ಪಡೆಯಲಿದ್ದಾರೆ’ ಎಂದು ಇಲಾಖೆಯ ಆಯುಕ್ತ ವಿ. ಅನ್ಬುಕುಮಾರ್ ತಿಳಿಸಿದರು.‘ಆಂಧ್ರದಲ್ಲಿ ಈಗಾಗಲೇ ಶಾಲೆಗಳನ್ನು ಪುನರಾರಂಭಸಿದೆ. ರಾಜ್ಯ ಸರ್ಕಾರವೂ ಎಲ್ಲ ಸಿದ್ಧತೆ ಮಾಡಿಕೊಳ್ಳುತ್ತಿದ್ದು, ನವೆಂಬರ್ ಕೊನೆ ಅಥವಾ ಡಿಸೆಂಬರ್ ಮೊದಲ ವಾರದಲ್ಲಿ ಹಂತ–ಹಂತವಾಗಿ ಶಾಲೆಗಳನ್ನು ಆರಂಭಿಸುವ ಚಿಂತನೆ ಇದೆ’ ಎಂದು ಮೂಲಗಳು ತಿಳಿಸಿವೆ.

ಇಲಾಖೆಯ ಉಪನಿರ್ದೇಶಕರೊಂದಿಗೆ ಸೋಮವಾರ ವಿಡಿಯೊ ಸಂವಾದ ಏರ್ಪಡಿಸಲಾಗಿತ್ತು. ತಾಂತ್ರಿಕ ದೋಷದಿಂದ ಸಭೆ ನಡೆಯಲಿಲ್ಲ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.