ಮೀಸಲಾತಿ ಬಗ್ಗೆ ಸಚಿವ ಸಂಪುಟದಲ್ಲಿ ಚರ್ಚಿಸಿ ನಿರ್ಧಾರ: ಬಿ.ಎಸ್. ಯಡಿಯೂರಪ್ಪ

ದಾವಣಗೆರೆ: ಹಲವು ಸಮುದಾಯದ ಸ್ವಾಮಿಜಿಗಳು ಮೀಸಲಾತಿ ಬಗ್ಗೆ ನಡೆಸುತ್ತಿರುವ ಹೋರಾಟ ನ್ಯಾಯಸಮ್ಮತವಾಗಿದೆ. ಈ ಬಗ್ಗೆ ಸಚಿವ ಸಂಪುಟದಲ್ಲಿ ಚರ್ಚಿಸಿ ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹೇಳಿದರು.
ನ್ಯಾಮತಿ ತಾಲ್ಲೂಕಿನ ಸುರಗೊಂಡನಕೊಪ್ಪದಲ್ಲಿ ಭಾನುವಾರ ನಡೆದ ಸಂತ ಸೇವಾಲಾಲ್ ಜಯಂತ್ಯುತ್ಸವಕ್ಕೆ ಬಂದಿದ್ದ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು.
ವೀರಶೈವ ಲಿಂಗಾಯತ, ವಾಲ್ಮೀಕಿ ಸೇರಿ ಹಲವು ಸಮುದಾಯದ ಸ್ವಾಮೀಜಿಗಳು ಮೀಸಲಾತಿಗಾಗಿ ಹೋರಾಟ ನಡೆಸುತ್ತಿದ್ದಾರೆ. ಕಾನೂನಿನ ಚೌಕಟ್ಟಿನಲ್ಲಿ ಯಾವ ರೀತಿ ಸೌಲಭ್ಯ ಕೊಡಬಹುದು ಎಂದು ಚರ್ಚಿಸಿ ನಿರ್ಧಾರ ತೆಗೆದುಕೊಳ್ಳಲಾಗುವುದು. ಈ ಬಗ್ಗೆ ಸ್ವಾಮೀಜಿಗಳು ಯಾವುದೇ ಸಂಶಯ ಇಟ್ಟುಕೊಳ್ಳುವುದು ಬೇಡ ಎಂದು ಯಡಿಯೂರಪ್ಪ ಹೇಳಿದರು.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್ಬುಕ್ ಪುಟವನ್ನುಫಾಲೋ ಮಾಡಿ.