ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಉಜಿರೆ: ನ.19ರಿಂದ 23ರವರೆಗೆ ಧರ್ಮಸ್ಥಳ ಲಕ್ಷ ದೀಪೋತ್ಸವ

Last Updated 6 ನವೆಂಬರ್ 2022, 19:32 IST
ಅಕ್ಷರ ಗಾತ್ರ

ಉಜಿರೆ: ಧರ್ಮಸ್ಥಳ ಮಂಜುನಾಥ ಸ್ವಾಮಿಯ ಲಕ್ಷ ದೀಪೋತ್ಸವ ನ.19ರಿಂದ 23ರವರೆಗೆ ನಡೆಯಲಿದೆ. ನ.22ರಂದು ಸಂಜೆ 5 ಗಂಟೆಗೆ ಸರ್ವಧರ್ಮ ಸಮ್ಮೇಳನದ 90ನೇ ಅಧಿವೇಶನವನ್ನು ಕೇಂದ್ರ ಸಚಿವೆ ಸ್ಮೃತಿ ಇರಾನಿ ಉದ್ಘಾಟಿಸುವರು. ವಕೀಲ ಎಂ.ಆರ್. ಸತ್ಯನಾರಾಯಣ ಅಧ್ಯಕ್ಷತೆ ವಹಿಸುವರು.

ಬಸ್ರೀಕಟ್ಟೆ ಚರ್ಚ್‌ನ ಫಾ. ಮಾರ್ಸೆಲ್ ಪಿಂಟೊ, ವಿಜಯಪುರ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಹಾಸಿಂಪೀರ ಇ. ವಾಲೀಕಾರ ಮತ್ತು ಮೂಡುಬಿದಿರೆ ಜೈನ ಪ್ರೌಢಶಾಲೆಯ ನಿವೃತ್ತ ಮುಖ್ಯ ಶಿಕ್ಷಕ ಮುನಿರಾಜ ರೆಂಜಾಳ ಧಾರ್ಮಿಕ ಉಪನ್ಯಾಸ ನೀಡುವರು. ರಾತ್ರಿ 9ರಿಂದ ಸಂಗೀತ ಕಾರ್ಯಕ್ರಮ ನಡೆಯಲಿದೆ.

ನ.23ರಂದು ಸಂಜೆ 5ಕ್ಕೆ ಸಾಹಿತ್ಯ ಸಮ್ಮೇಳನವನ್ನು ಚಿತ್ರ ನಿರ್ದೇಶಕ ಪಿ. ಶೇಷಾದ್ರಿ ಉದ್ಘಾಟಿಸುವರು. ಮೈಸೂರಿನ ಡಾ. ಎಚ್.ವಿ. ನಾಗರಾಜ್ ರಾವ್ ಅಧ್ಯಕ್ಷತೆ ವಹಿಸುವರು. ಸತ್ಯೇಶ್ ಎನ್. ಬೆಳ್ಳೂರ್, ‘ಪ್ರಜಾವಾಣಿ’ ಕಾರ್ಯನಿರ್ವಾಹಕ ಸಂಪಾದಕ ರವೀಂದ್ರ ಭಟ್ಟ ಐನಕೈ, ಲೇಖಕಿ ಡಾ. ಗೀತಾವಸಂತ ಉಪನ್ಯಾಸ ನೀಡುವರು. ರಿಕಿ ಕೇಜ್ ಬಳಗದಿಂದ ಸಂಗೀತ, ನೃತ್ಯ ವೈವಿಧ್ಯ ನಡೆಯಲಿದೆ. ರಾತ್ರಿ 12 ಗಂಟೆ ಬಳಿಕ ಮಂಜುನಾಥ ಸ್ವಾಮಿಯ ಲಕ್ಷದೀಪೋತ್ಸವ ನಡೆಯಲಿದೆ. ಈ ಅಂಗವಾಗಿ ಕೆಎಸ್‌ಆರ್‌ಟಿಸಿ ರಾಜ್ಯದ ವಿವಿಧ ಭಾಗಗಳಿಂದ ಧರ್ಮಸ್ಥಳಕ್ಕೆ ವಿಶೇಷ ಬಸ್ ಸೌಲಭ್ಯ ಕಲ್ಪಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT