ಗುರುವಾರ , ಜುಲೈ 7, 2022
23 °C

ನ್ಯಾಯಾಂಗ ನಿಂದನೆ: ನಟ ಚೇತನ್‌ ಪೊಲೀಸ್ ವಶಕ್ಕೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ನ್ಯಾಯಾಂಗವನ್ನು ನಿಂದಿಸಿ ಸಾಮಾಜಿಕ ಮಾಧ್ಯಮಗಳಲ್ಲಿ ಬರಹ ಪ್ರಕಟಿಸಿದ ಪ್ರಕರಣದಲ್ಲಿ ನಟ ಚೇತನ್ ಅವರನ್ನು ಪೊಲೀಸರು ವಶಕ್ಕೆ ಪಡೆದಿದ್ದು, ಇದೊಂದು ಅಪಹರಣವೆಂದು ಚೇತನ್ ಪತ್ನಿ ಮೇಘಾ ಆರೋಪಿಸಿದ್ದಾರೆ.

ಮಧ್ಯಾಹ್ನ 3 ಗಂಟೆಗೆ ಚೇತನ್‌ ಅವರನ್ನು ಮನೆಯಿಂದ ವಶಕ್ಕೆ ಪಡೆದಿರುವ ಪೊಲೀಸರು, ಅಜ್ಞಾತ ಸ್ಥಳಕ್ಕೆ ಕರೆದೊಯ್ದಿದ್ದಾರೆ. ‘ಪತಿ ಎಲ್ಲಿದ್ದಾರೆ’ ಎಂಬುದನ್ನು ತಿಳಿಯಲು ಪತ್ನಿ ಮೇಘಾ, ಶೇಷಾದ್ರಿಪುರ ಠಾಣೆಗೆ ಬಂದಿದ್ದಾರೆ.

ಆದರೆ, ಚೇತನ್ ಶೇಷಾದ್ರಿಪುರ ಠಾಣೆಯಲ್ಲಿಲ್ಲ ಎಂಬ ಮಾಹಿತಿ ಮೇಘಾ ಅವರಿಗೆ ಗೊತ್ತಾಗಿದೆ. ಘಟನೆ ಬಗ್ಗೆ ವಿಡಿಯೊ ಹರಿಬಿಟ್ಟಿರುವ ಮೇಘನಾ, ‘ಪೊಲೀಸರೆಂದು ಹೇಳಿಕೊಂಡು ಮನೆಗೆ ಬಂದಿದ್ದ ಕೆಲವರು, ಚೇತನ್ ಅವರನ್ನು ಕರೆದೊಯ್ದಿದ್ದಾರೆ. ಅವರು ಈಗ ಎಲ್ಲಿದ್ದಾರೆಂಬುದನ್ನು ಯಾರೂ ಹೇಳುತ್ತಿಲ್ಲ’ ಎಂದು ಅಳಲು ತೋಡಿಕೊಂಡಿದ್ದಾರೆ.

‘ಚೇತನ್ ಹಾಗೂ ಅವರ ಅಂಗರಕ್ಷಕನ ಮೊಬೈಲ್ ಸ್ವಿಚ್ ಆಫ್ ಆಗಿದೆ. ಇದೊಂದು ಷಡ್ಯಂತ್ರದಂತೆ ಕಾಣುತ್ತಿದೆ’ ಎಂದೂ ದೂರಿದ್ದಾರೆ.

‘ಅಪರಾಧ ಪ್ರಕರಣದ ಬಗ್ಗೆ ಯಾವುದೇ ಮಾಹಿತಿ ನೀಡಿಲ್ಲ. ನೋಟಿಸ್ ಸಹ ಕೊಟ್ಟಿಲ್ಲ. ಇದೊಂದು ಅಕ್ರಮ ಬಂಧನವಾಗಿದೆ. ಇದರ ವಿರುದ್ಧ ಹೋರಾಡಲು ಜನರು ಬೆಂಬಲ ನೀಡಬೇಕು’ ಎಂದೂ ಕೋರಿದ್ದಾರೆ.

ಪೊಲೀಸ್ ಅಧಿಕಾರಿಯೊಬ್ಬರು, ‘ಅತ್ಯಾಚಾರ ಪ್ರಕರಣವೊಂದರಲ್ಲಿ ಹೈಕೋರ್ಟ್ ನ್ಯಾಯಮೂರ್ತಿಯೊಬ್ಬರು ಜಾಮೀನು ಮಂಜೂರು ಮಾಡಿದ್ದರು. ಇದೇ ವಿಷಯ ಪ್ರಸ್ತಾಪಿಸಿ ಚೇತನ್ ಅವರು ನ್ಯಾಯಾಂಗ ನಿಂದನೆ ಮಾಡಿರುವ ಆರೋಪವಿದೆ. ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ’ ಎಂದು ತಿಳಿಸಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು