ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬೆಂಗಳೂರು: ಎಫ್‌ಸಿಎಸ್ ಕಾಂಪ್ಲೆಕ್ಸ್ ಉದ್ಘಾಟಿಸಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್

Last Updated 17 ಮಾರ್ಚ್ 2022, 11:23 IST
ಅಕ್ಷರ ಗಾತ್ರ

ಬೆಂಗಳೂರು: ನಗರದಲ್ಲಿರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆ (ಡಿಆರ್‌ಡಿಒ) ವತಿಯಿಂದ ನಿರ್ಮಿಸಲಾಗಿರುವ ಏಳು ಅಂತಸ್ತಿನ ಕಟ್ಟಡವನ್ನು ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಗುರುವಾರ ಉದ್ಘಾಟಿಸಿದರು.

1.3 ಲಕ್ಷ ಚದರ ಅಡಿ ವಿಸ್ತೀರ್ಣವಿರುವ ಈ ಕಟ್ಟಡವನ್ನು ಅತ್ಯಾಧುನಿಕ ತಂತ್ರಜ್ಞಾನದ ಸಹಾಯದಿಂದ ಕೇವಲ 45 ದಿನಗಳಲ್ಲಿ ನಿರ್ಮಿಸಲಾಗಿದೆ.

ಬೆಂಗಳೂರಿನ ಏರೋನಾಟಿಕಲ್ ಡೆವಲಪ್‌ಮೆಂಟ್ ಎಸ್ಟಾಬ್ಲಿಷ್‌ಮೆಂಟ್ (ಎಡಿಇ) ಆವರಣದಲ್ಲಿ ಈ ಕಟ್ಟಡವಿದೆ.

ಯುದ್ಧ ವಿಮಾನಗಳ ಏವಿಯಾನಿಕ್ಸ್ (ವಿಮಾನಗಳಲ್ಲಿ ಎಲೆಕ್ಟ್ರಾನಿಕ್ಸ್‌ ವ್ಯವಸ್ಥೆ), ಮಾನವರಹಿತ ವೈಮಾನಿಕ ವ್ಯವಸ್ಥೆ ಹಾಗೂ ವಿಮಾನ ನಿಯಂತ್ರಣ ವ್ಯವಸ್ಥೆ (ಎಫ್‌ಸಿಎಸ್) ಅಭಿವೃದ್ಧಿಪಡಿಸುವ ಉದ್ದೇಶಕ್ಕಾಗಿ ಸೌಲ್ಯಭ್ಯ ಕಲ್ಪಿಸಲಾಗಿದೆಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಸಂಸದ ಪಿ.ಸಿ.ಮನೋಹರ್, ಡಿಆರ್‌ಡಿಒ ಮತ್ತು ಎಡಿಇ ಅಧಿಕಾರಿಗಳು ಸೇರಿದಂತೆ ಅನೇಕರು ಉಪಸ್ಥಿತರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT