ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರೈತನಿಗೆ ಪರಿಹಾರ ವಿಳಂಬ: ಅಧಿಕಾರಿಗಳ ವಾಹನ ಜಪ್ತಿ

ರಸ್ತೆ ನಿರ್ಮಿಸಲು 15 ವರ್ಷಗಳ ಹಿಂದೆ ಸರ್ಕಾರಕ್ಕೆ ಭೂಮಿ ನೀಡಿದ್ದ ರೈತ
Last Updated 17 ನವೆಂಬರ್ 2022, 20:56 IST
ಅಕ್ಷರ ಗಾತ್ರ

ಚಿಕ್ಕೋಡಿ (ಬೆಳಗಾವಿ ಜಿಲ್ಲೆ): ರಸ್ತೆ ನಿರ್ಮಿಸಲು ಸ್ವಾದೀನ ಪಡೆದಿದ್ದ ಭೂಮಿಗೆ ರೈತನಿಗೆ ₹11 ಲಕ್ಷ ಪರಿಹಾರಧನ ನೀಡಲು ವಿಳಂಬ ಹಿನ್ನೆಲೆಯಲ್ಲಿ ಕೋರ್ಟ್‌ ಆದೇಶದಂತೆ ಉಪವಿಭಾಗಾಧಿಕಾರಿ ಮತ್ತು ಲೋಕೋಪಯೋಗಿ ಇಲಾಖೆ ಎಇಇ ಅವರ ವಾಹನಗಳನ್ನು ಗುರುವಾರ ಜಪ್ತಿ ಮಾಡಲಾಗಿದೆ.

15 ವರ್ಷದ ಹಿಂದೆ ಚಿಕ್ಕೋಡಿ ತಾಲ್ಲೂಕಿನ ಮಾಂಗೂರ (ಈಗಿನ ನಿಪ್ಪಾಣಿ ತಾಲ್ಲೂಕು) ಗ್ರಾಮದ ರೈತ ಬುದ್ದಿರಾಜ ಶಾಂತಿನಾಥ ಪಾಟೀಲ ಅವರ 31 ಗುಂಟೆ ಭೂಮಿಯನ್ನು ಇಲಾಖೆ ಪಡೆದುಕೊಂಡಿತ್ತು. ಈವರೆಗೂ ರೈತನಿಗೆ ಪರಿಹಾರ ಧನ ನೀಡಿರಲಿಲ್ಲ.

ರೈತ ಪರಿಹಾರ ಕೋರಿ ಪ್ರಕರಣ ದಾಖಲಿಸಿದ್ದರು. ವಿಚಾರಣೆ ನಡೆಸಿದ ನ್ಯಾಯಾಲಯ 2021ರಲ್ಲಿ ₹11,70,757 ಪರಿಹಾರ ನೀಡಲು ಆದೇಶಿಸಿತ್ತು. ಒಂದು ವರ್ಷ ಕಳೆದರೂ ಪರಿಹಾರ ನೀಡದ್ದರಿಂದ ವಾಹನಗಳ ಜಪ್ತಿಗೆ ನ್ಯಾಯಾಲಯ ಆದೇಶಿಸಿತ್ತು.

ವಾಹನ ಜಪ್ತಿಗೆ ಬಂದ ಸಂದರ್ಭದಲ್ಲಿ ಉಪವಿಭಾಗಾಧಿಕಾರಿ ಮಾಧವ ಗಿತ್ತೆ ಮತ್ತು ನ್ಯಾಯಾಲಯ ಸಿಬ್ಬಂದಿ ಮಧ್ಯೆ ಕೆಲಹೊತ್ತು ಮಾತಿನ ಚಕಮಕಿಯೂ ನಡೆಯಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT