ಗುರುವಾರ , ಆಗಸ್ಟ್ 11, 2022
27 °C

ಕಂದಾಯ ಗ್ರಾಮ ಘೋಷಣೆಗೆ ಮೀನಮೇಷ: ಆಕ್ಷೇಪ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಕಂದಾಯ ಗ್ರಾಮಗಳ ಘೋಷಣೆಗೆ ಮೀನಮೇಷ ಎಣಿಸಲಾಗುತ್ತಿದೆ ಎಂದು ಬಿಜೆಪಿ ಸದಸ್ಯರೇ ವಿಧಾನಸಭೆಯಲ್ಲಿ ಸೋಮವಾರ ಆಕ್ಷೇಪ ವ್ಯಕ್ತಪಡಿಸಿದರು.

ಪ್ರಶ್ನೋತ್ತರ ಅವಧಿಯಲ್ಲಿ ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದ ಕೆ.ಬಿ.ಅಶೋಕ್‌ ನಾಯ್ಕ್‌ ಈ ಬಗ್ಗೆ ಪ್ರಶ್ನೆ ಕೇಳಿದರು.

ಕಂದಾಯ ಗ್ರಾಮಗಳನ್ನಾಗಿ ಅಧಿಸೂಚನೆ ಹೊರಡಿಸುವ ಪ್ರಕ್ರಿಯೆ ವಿವಿಧ ಹಂತದಲ್ಲಿದೆ ಎಂದು ಕಂದಾಯ ಸಚಿವ ಆರ್‌.ಅಶೋಕ ಉತ್ತರಿಸಿದರು.

ಅಶೋಕ್‌ ನಾಯ್ಕ್‌, ’ರಾಜ್ಯದಲ್ಲಿ 57 ಸಾವಿರ ಜನವಸತಿ ಪ್ರದೇಶಗಳಿವೆ ಎಂದು ಗ್ರಾಮೀಣಾಭಿವೃದ್ಧಿ ಇಲಾಖೆ ದಾಖಲೆಗಳಲ್ಲಿದೆ. 33 ಸಾವಿರ ಕಂದಾಯ ಗ್ರಾಮಗಳನ್ನು ಕಂದಾಯ ಇಲಾಖೆ ಘೋಷಣೆ ಮಾಡಿದೆ. ಉಳಿದ ಜನವಸತಿ ಪ್ರದೇಶಗಳನ್ನು ಸಹ ಕಂದಾಯ ಗ್ರಾಮಗಳಾಗಿ ಘೋಷಿಸಬೇಕು’ ಎಂದು ಆಗ್ರಹಿಸಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು