ಶುಕ್ರವಾರ, 10 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಿಡಿಯೊ ನೋಡಿ: ಡಿ.ಕೆ.ಸುರೇಶ್‌ರನ್ನು ತಳ್ಳಿದ ದೆಹಲಿ ಪೊಲೀಸರು, ಕಾಂಗ್ರೆಸ್ ಆಕ್ರೋಶ

ಅಕ್ಷರ ಗಾತ್ರ

ನವದೆಹಲಿ: ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಹಾಗೂ ನಾಯಕ ರಾಹುಲ್ ಗಾಂಧಿ ಅವರನ್ನು ಜಾರಿ ನಿರ್ದೇಶನಾಲಯ (ಇ.ಡಿ) ವಿಚಾರಣೆಗೆ ಒಳಪಡಿಸುವುದನ್ನು ಖಂಡಿಸಿ ಕಾಂಗ್ರೆಸ್ ನಾಯಕರು, ಕಾರ್ಯಕರ್ತರು ದೆಹಲಿಯಲ್ಲಿ ಮಂಗಳವಾರವೂ ಪ್ರತಿಭಟನೆ ನಡೆಸಿದ್ದಾರೆ.

ಜಾರಿ ನಿರ್ದೇಶನಾಲಯದ ಪ್ರಧಾನ ಕಚೇರಿಯತ್ತ ಪ್ರತಿಭಟನಾ ಮೆರವಣಿಗೆ ಹಮ್ಮಿಕೊಂಡ ಕಾಂಗ್ರೆಸ್ ನಾಯಕರು, ಕಾರ್ಯಕರ್ತರನ್ನು ದೆಹಲಿ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಇದೇ ವೇಳೆ ಕರ್ನಾಟಕದ ಬೆಂಗಳೂರು ಗ್ರಾಮಾಂತರ ಸಂಸದ ಡಿ.ಕೆ. ಸುರೇಶ್ ಅವರನ್ನು ಪೊಲೀಸರು ತಳ್ಳಿದ್ದಾರೆ ಎಂದು ಆರೋಪಿಸಿರುವ ಕರ್ನಾಟಕ ಕಾಂಗ್ರೆಸ್, ಅದಕ್ಕೆ ಸಂಬಂಧಿಸಿದ ವಿಡಿಯೊ ಟ್ವೀಟ್ ಮಾಡಿದ್ದು ಬಿಜೆಪಿ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದೆ.

‘ಬಿಜೆಪಿ ಸರ್ಕಾರದ ವಿರುದ್ಧದ ಹೋರಾಟವು ಮತ್ತೊಮ್ಮೆ ಬ್ರಿಟಿಷ್ ಸಾಮ್ರಾಜ್ಯಶಾಹಿಯ ವಿರುದ್ದದ ಹೋರಾಟವನ್ನು ನೆನಪಿಸುತ್ತಿದೆ. ಹೋರಾಡುತ್ತೇವೆ, ದೇಶವನ್ನು ಫ್ಯಾಸಿಸ್ಟ್ ಶಕ್ತಿಗಳಿಂದ ಮುಕ್ತಗೊಳಿಸುತ್ತೇವೆ, ಆ ಬದ್ಧತೆ ನಮಗಿದೆ. ಜನಪ್ರತಿನಿಧಿಗಳೊಂದಿಗೆ ಪೊಲೀಸರ ಈ ನಡವಳಿಕೆ ಪ್ರಜಾಪ್ರಭುತ್ವವನ್ನು ಅಣಕಿಸುವಂತಿದೆ’ ಎಂದು ಟ್ವೀಟ್‌ನಲ್ಲಿ ಕಾಂಗ್ರೆಸ್ ಉಲ್ಲೇಖಿಸಿದೆ.

ನ್ಯಾಷನಲ್ ಹೆರಾಲ್ಡ್ ಪ್ರಕರಣಕ್ಕೆ ಸಂಬಂಧಿಸಿ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಸೋಮವಾರವೂರಾಹುಲ್ ಗಾಂಧಿಯನ್ನು 3 ತಾಸಿಗೂ ಹೆಚ್ಚು ಕಾಲ ವಿಚಾರಣೆಗೆ ಒಳಪಡಿಸಿದ್ದರು. ಜಾರಿ ನಿರ್ದೇಶನಾಲಯದ ನಡೆ ಖಂಡಿಸಿ ದೇಶದ ಹಲವೆಡೆ ಕಾಂಗ್ರೆಸ್ ನಾಯಕರು, ಕಾರ್ಯಕರ್ತರು ಪ್ರತಿಭಟನೆ ನಡೆಸುತ್ತಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT