ಬುಧವಾರ, ಡಿಸೆಂಬರ್ 8, 2021
28 °C

ಸಂಪುಟ ವಿಸ್ತರಣೆ| ದೆಹಲಿ ಭೇಟಿ ನಿಗದಿಯಾಗಿಲ್ಲ– ಯಡಿಯೂರಪ್ಪ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ‘ರಾಜ್ಯ ಸಚಿವ ಸಂಪುಟ ವಿಸ್ತರಣೆ ವಿಚಾರವಾಗಿ ವರಿಷ್ಠರ ಜೊತೆ ಮಾತುಕತೆ ನಡೆಸಲು ದೆಹಲಿಯ ಭೇಟಿಗೆ ದಿನಾಂಕ ನಿಗದಿಯಾಗಿಲ್ಲ’ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ತಿಳಿಸಿದರು.

ಸುದ್ದಿಗಾರರ ಜೊತೆ ಮಂಗಳವಾರ ಮಾತನಾಡಿದ ಅವರು, ‘ದೆಹಲಿಗೆ ತೆರಳುವ ಕುರಿತು ಶೀಘ್ರದಲ್ಲೇ ನಿರ್ಧರಿಸಲಾಗುವುದು’ ಎಂದರು.

 ‘ಪ್ರತಿಯೊಬ್ಬರು ಅಧಿವೇಶನಕ್ಕೆ ತಪ್ಪದೇ ಹಾಜರಾಗುವಂತೆ ಸೂಚನೆ ನೀಡಲಾಗಿದೆ. ವಾಸ್ತವಿಕ ಸಂಗತಿಗಳನ್ನು ಮುಂದಿಡಲು ಸದನ ಉತ್ತಮ ಅವಕಾಶವಾಗಿದೆ. ಪೂರ್ವಭಾವಿ ಸಿದ್ದತೆ ಮಾಡಿಕೊಂಡು ಕಾರ್ಯಕಲಾಪಗಳಲ್ಲಿ ಭಾಗವಹಿಸುವಂತೆ ಸೂಚನೆ ನೀಡಲಾಗಿದೆ’ ಎಂದು ಯಡಿಯೂರಪ್ಪ ಹೇಳಿದರು.

‘ಪ್ರವಾಹ ಸಮೀಕ್ಷೆಗೆ ಬಂದ ಕೇಂದ್ರದ ತಂಡಕ್ಕೆ ಎಲ್ಲ ಮಾಹಿತಿ ನೀಡಲಾಗಿದೆ. ಪ್ರವಾಹ ಹಾನಿ ಕುರಿತು ಮನವರಿಕೆ ಮಾಡುವ ಪ್ರಯತ್ನ ಮಾಡಿದ್ದೇವೆ. ಅವರು ಏನು ವರದಿ ಕೊಡುತ್ತಾರೆ ಎಂಬುದನ್ನು ನೋಡಿಕೊಂಡು ಹೆಚ್ಚಿನ ಪರಿಹಾರ ಕೇಳಲು ದೆಹಲಿಗೆ ಹೋಗುತ್ತೇನೆ’ ಎಂದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು