ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ತುಳು, ಕೊಡವ ಭಾಷೆಗಳಿಗೆ ರಾಜ್ಯ ಭಾಷಾ ಸ್ಥಾನಮಾನಕ್ಕೆ ಯತ್ನ’; ಸಚಿವ ಸುನೀಲ್ ಕುಮಾರ

Last Updated 23 ಸೆಪ್ಟೆಂಬರ್ 2021, 3:10 IST
ಅಕ್ಷರ ಗಾತ್ರ

ಬೆಂಗಳೂರು: ತುಳು ಮತ್ತು ಕೊಡವ ಭಾಷೆಗಳನ್ನು ಸಂವಿಧಾನದ ಎಂಟನೇ ಪರಿಚ್ಛೇದಕ್ಕೆ ಸೇರಿಸಿ, ರಾಜ್ಯಭಾಷಾ ಸ್ಥಾನಮಾನ ನೀಡಲು ಅಗತ್ಯವಿರುವ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದು ಕನ್ನಡ ಮತ್ತು ಸಂಸ್ಕೃತಿ ಸಚಿವ ವಿ. ಸುನೀಲ್‌ ಕುಮಾರ್‌ ಭರವಸೆ ನೀಡಿದರು.

ವಿಧಾನ ಪರಿಷತ್‌ನಲ್ಲಿ ಬುಧವಾರ ಕಾಂಗ್ರೆಸ್‌ನ ಬಿ.ಕೆ. ಹರಿಪ್ರಸಾದ್‌ ಶೂನ್ಯವೇಳೆಯಲ್ಲಿ ಮಾಡಿದ ಆಗ್ರಹಕ್ಕೆ ಉತ್ತರಿಸಿದ ಅವರು, ‘ತುಳು ಮತ್ತು ಕೊಡವ ಎರಡೂ ಭಾಷೆಗಳನ್ನು ಸಂವಿಧಾನದ ಎಂಟನೇ ಪರಿಚ್ಛೇದಕ್ಕೆ ಸೇರಿಸಲು ಇರುವ ತೊಡಕುಗಳ ಕುರಿತು ಅಧಿಕಾರಿಗಳ ಜತೆ ಸಭೆ ನಡೆಸಿದ್ದೇನೆ. ನಾನು ಖುದ್ದಾಗಿ ದೆಹಲಿಗೆ ಹೋಗಿ ಕೇಂದ್ರ ಸರ್ಕಾರದ ಮನವೊಲಿಸುವ ಕೆಲಸ ಮಾಡುತ್ತೇನೆ’ ಎಂದರು.

ವಿಷಯ ಪ್ರಸ್ತಾಪಿಸಿ ಮಾತನಾಡಿದ ಹರಿಪ್ರಸಾದ್‌, ‘ತುಳು ಮತ್ತು ಕೊಡವ ಭಾಷೆಗಳಿಗೆ ಸಾವಿರಾರು ವರ್ಷಗಳ ಇತಿಹಾಸವಿದೆ. ಎರಡೂ ಭಾಷೆಗಳನ್ನು ಲಕ್ಷಾಂತರ ಮಂದಿ ಬಳಕೆ ಮಾಡುತ್ತಾರೆ. ಈ ಭಾಷೆಗಳನ್ನು ಎಂಟನೇ ಪರಿಚ್ಛೇದಕ್ಕೆ ಸೇರಿಸಿದರೆ ಅವುಗಳ ಸಂರಕ್ಷಣೆ ಮತ್ತು ಅಭಿವೃದ್ಧಿಗೆ ನೆರವಾಗುತ್ತದೆ. ಈ ವಿಷಯದಲ್ಲಿ ಕೇಂದ್ರ ಸರ್ಕಾರದ ಮೇಲೆ ಒತ್ತಡ ತರುವ ಕೆಲಸವನ್ನು ರಾಜ್ಯ ಸರ್ಕಾರ ಮಾಡಬೇಕು’ ಎಂದು ಆಗ್ರಹಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT