ಬೆಂಗಳೂರು: ಒಕ್ಕಲಿಗ ಸಮುದಾಯಕ್ಕೆ ಮೀಸಲಾತಿ ಪ್ರಮಾಣ ಹೆಚ್ಚಿಸುವ ಕುರಿತು ರಾಜ್ಯ ಸರ್ಕಾರವು ನಿರ್ಲಕ್ಷ್ಯಧೋರಣೆ ತಳೆದಿದ್ದು, ಮುಂದಿನ ಹೋರಾಟ ರೂಪಿಸುವ ಕುರಿತು ಆದಿಚುಂಚನಗಿರಿ ಮಠದ ಪೀಠಾಧ್ಯಕ್ಷ ಡಾ.ನಿರ್ಮಲಾನಂದನಾಥ ಸ್ವಾಮೀಜಿ ಅವರೊಂದಿಗೆ ರಾಜ್ಯ ಒಕ್ಕಲಿಗರ ಸಂಘದ ನಿಯೋಗವು ಚರ್ಚೆನಡೆಸಿತು.
ಸಂಘದ ಅಧ್ಯಕ್ಷ ಸಿ.ಎನ್.ಬಾಲಕೃಷ್ಣ ಅವರ ನೇತೃತ್ವದ ನಿಯೋಗವು ಇಲ್ಲಿನ ವಿಜಯನಗರ ಶಾಖಾಮಠದಲ್ಲಿ ಸ್ವಾಮೀಜಿ ಅವರನ್ನು ಭೇಟಿ ಮಾಡಿ ಸಮಾಲೋಚನೆ ನಡೆಸಿದೆ.
ಒಕ್ಕಲಿಗರ ಸಮುದಾಯದ ಮೀಸಲಾತಿ ಪ್ರಮಾಣ ಹೆಚ್ಚಳಕ್ಕಾಗಿ ಯಾವ ಸ್ವರೂಪದ ಹೋರಾಟ ನಡೆಸಬೇಕು. ಎಂದಿನಿಂದ ಹೋರಾಟ ರೂಪಿಸಬೇಕು ಎಂದು ಚರ್ಚೆ ನಡೆಸಲಾಯಿತು ಎಂದು ಬಾಲಕೃಷ್ಣ ತಿಳಿಸಿದರು.
ಒಕ್ಕಲಿಗರ ಸಂಘದ ಆವರಣದಲ್ಲಿ ಈಚೆಗೆ ನಡೆದಿದ್ದ ಮೀಸಲಾತಿ ಹೋರಾಟದ ಪೂರ್ವಭಾವಿ ಸಭೆಯಲ್ಲಿ ಒಕ್ಕಲಿಗರ ಸಮುದಾಯದ
ಮೀಸಲಾತಿ ಪ್ರಮಾಣವನ್ನು (3ಎ) ಶೇ 4ರಿಂದ ಶೇ 12ಕ್ಕೆ ಹೆಚ್ಚಿಸುವಂತೆಆಗ್ರಹಿಸಲಾಗಿತ್ತು. ರಾಜ್ಯಸರ್ಕಾರಕ್ಕೆ ಗಡುವು ನೀಡಲಾಗಿತ್ತು. ಆದರೆ, ಇದುವರೆಗೂ ಮೀಸಲಾತಿ ಹೆಚ್ಚಿಸುವ ಕುರಿತು ಸರ್ಕಾರ ನಿರ್ಧಾರ ಪ್ರಕಟಿಸಿಲ್ಲ. ಆದ್ದರಿಂದ,ಮುಂದಿನ ಹೋರಾಟ ನಡೆಸುವ ಕುರಿತು ಚರ್ಚೆ ನಡೆಸಲಾಗಿದೆ ಎಂದು ಹೇಳಿದರು.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.