ಸೋಮವಾರ, ಮೇ 23, 2022
28 °C
ಹಿಂದುಳಿದ ವರ್ಗಕ್ಕೆ ಕುಂಚಿಟಿಗರ ಸೇರ್ಪಡೆಗೆ ಒತ್ತಾಯ

ಒಬಿಸಿ ಸೇರ್ಪಡೆಗೆ ಕುಂಚಿಟಿಗರ ಒತ್ತಾಯ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಶಿರಾ: ಕುಂಚಿಟಿಗ ಸಮಾಜದ ಕುಲಶಾಸ್ತ್ರ ಅಧ್ಯಯನದ ವರದಿಯನ್ನು ಸಂಪುಟ ಸಭೆಯಲ್ಲಿ ಯಥಾವತ್ತಾಗಿ ಮಂಡಿಸಿ, ಕುಂಚಿಟಿಗ ಸಮಾಜವನ್ನು ಹಿಂದುಳಿದ ವರ್ಗಕ್ಕೆ ಸೇರಿಸಲು ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡಬೇಕು ಎಂದು ಹೊಸದುರ್ಗದ ಕುಂಚಿಟಿಗ ಮಹಾಸಂಸ್ಥಾನ ಮಠದ ಪೀಠಾಧ್ಯಕ್ಷ ಶಾಂತವೀರ ಸ್ವಾಮೀಜಿ ಒತ್ತಾಯಿಸಿದ್ದಾರೆ.

ಚಿಕ್ಕನಹಳ್ಳಿ ಗ್ರಾಮದಲ್ಲಿ ಸೋಮವಾರ ನಡೆದ ಜವಲಿಂಗೇಶ್ವರ ಸ್ವಾಮಿ ದೇವಸ್ಥಾನದ ಕಳಸ ಪ್ರತಿಷ್ಠಾಪನೆ ಹಾಗೂ ಧಾರ್ಮಿಕ ಜಾಗೃತಿ ಸಭೆಯ ಸಾನ್ನಿಧ್ಯ ವಹಿಸಿ ಮಾತನಾಡಿದರು.

ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಚುನಾವಣೆ ಸಮಯದಲ್ಲಿ ಘೋಷಣೆ ಮಾಡಿದಂತೆ ಕುಂಚಿಟಿಗರನ್ನು ಹಿಂದುಳಿದ ವರ್ಗಕ್ಕೆ (ಒಬಿಸಿ) ಸೇರಿಸಲು ಕ್ರಮ ತೆಗೆದುಕೊಳ್ಳಬೇಕು ಎಂದು ಅವರು ಆಗ್ರಹಿಸಿದರು.

ಕೇಂದ್ರ ಸರ್ಕಾರಕ್ಕೆ ವರದಿ ಕಳುಹಿಸಿ ಜನಾಂಗಕ್ಕೆ ಒಬಿಸಿ ಸೌಲಭ್ಯ ದೊರಕಿಸಿಕೊಡುವ ಮೂಲಕ ಕೊಟ್ಟ ಮಾತನ್ನು ಯಡಿಯೂರಪ್ಪನವರು ಉಳಿಸಿಕೊಳ್ಳಬೇಕು ಎಂದು ಒತ್ತಾಯಿಸಿದರು.

‘ಕುಂಚಿಟಿಗ ಸಮಾಜಕ್ಕೆ ಕೇಂದ್ರದಲ್ಲಿ ಒಬಿಸಿ ಮೀಸಲಾತಿ ನೀಡುವಂತೆ ಹಲವು ವರ್ಷಗಳಿಂದ ಹೋರಾಟ ನಡೆಸಲಾಗುತ್ತಿದೆ. ಕುಲಶಾಸ್ತ್ರ ಅಧ್ಯಯನ ವರದಿ  ಬಂದಿದ್ದು ತಕ್ಷಣ ಕುಂಚಿಟಿಗರಿಗೆ ಒಬಿಸಿ ಮೀಸಲಾತಿ ನೀಡಬೇಕು’ ಎಂದು ಮಾಜಿ ಸಚಿವ ಟಿ.ಬಿ.ಜಯಚಂದ್ರ ಒತ್ತಾಯಿಸಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು