ಪ್ರತಿ ಕೋಳಿಗೆ ₹5 ಪ್ರೋತ್ಸಾಹ ಧನ ನೀಡಲು ಆಗ್ರಹ

ಬೆಂಗಳೂರು: ‘ಕೋಳಿ ಸಾಕಾಣಿಕೆಯನ್ನು ಕೃಷಿ ಎಂದು ಪರಿಗಣಿಸಿ ಮುಂಬರುವ ಬಜೆಟ್‌ನಲ್ಲಿ ಕುಕ್ಕುಟ ಕ್ಷೇತ್ರದ ಅಭಿವೃದ್ಧಿಗೆ ಸಮಗ್ರ ಕಾನೂನನ್ನು ಘೋಷಣೆ ಮಾಡಬೇಕು’ ಎಂದು ಕರ್ನಾಟಕ ರಾಜ್ಯ ಕೋಳಿ ಸಾಕಾಣಿಕೆದಾರ ರೈತರ ಕ್ಷೇಮಾಭಿವೃದ್ಧಿ ಸಂಘ ಆಗ್ರಹಿಸಿದೆ.
‘ಪ್ರತಿ ಲೀಟರ್ ಹಾಲಿಗೆ ನೀಡುವ ₹ 5 ಪ್ರೋತ್ಸಾಹ ಧನವನ್ನು ಪ್ರತಿ ಮಾಂಸದ ಕೋಳಿಗೂ ನೀಡಬೇಕು. ಕೃಷಿ ಮತ್ತು ರೇಷ್ಮೆ ಬೆಳೆಗಾರರಿಗೆ ನೀಡುತ್ತಿರುವ ಸೌಲಭ್ಯಗಳನ್ನು ಕೋಳಿ ಸಾಕಾಣಿಕೆದಾರ ರೈತರಿಗೂ ವಿಸ್ತರಿಸಬೇಕು. ಸರ್ಕಾರ ಕುಕ್ಕುಟ ಕ್ಷೇತ್ರವನ್ನು ಹೈನುಗಾರಿಕೆ ಕ್ಷೇತ್ರಕ್ಕಿಂತ ಬಲಿಷ್ಠವಾಗಿ ಅಭಿವೃದ್ಧಿ ಪಡಿಸಲು ಸರ್ಕಾರ ಅಗತ್ಯ ಕ್ರಮ ಕೈಗೊಳ್ಳಬೇಕು’ ಎಂದು ಸಂಘದ ಗೌರವ ಅಧ್ಯಕ್ಷ ಜೆ.ಸಿ. ಬಯ್ಯಾರೆಡ್ಡಿ ಎಂದು ಮಂಗಳವಾರ ಸುದ್ದಿಗೋಷ್ಠಿ ಹೇಳಿದರು.
‘ರಾಜ್ಯದಲ್ಲಿ 10 ಸಾವಿರ ಕೋಳಿ ಸಾಕಾಣಿಕೆದಾರ ರೈತರು ವಿವಿಧ ಕಂಪನಿಗಳ ಜೊತೆ ಒಪ್ಪಂದ ಮಾಡಿಕೊಂಡು ಮಾಂಸದ ಕೋಳಿಗಳನ್ನು (ಬ್ರಾಯಿಲರ್) ಸಾಕಾಣಿಕೆ ಮಾಡುತ್ತಿದ್ದಾರೆ. ರಾಜ್ಯದಲ್ಲಿ ಕುಕ್ಕುಟ ಕ್ಷೇತ್ರವೂ ವೇಗವಾಗಿ ಬೆಳೆಯುತ್ತಿದ್ದು, ಪ್ರತಿದಿನ ಸಾವಿರಾರು ಕೋಟಿ ರೂಪಾಯಿ ವಹಿವಾಟು ನಡೆಯುತ್ತಿದೆ. ಇದನ್ನು ಮತ್ತಷ್ಟು ಅಭಿವೃದ್ಧಿಪಡಿಸಲು ಸರ್ಕಾರಕ್ಕೆ ಅವಕಾಶಗಳಿದ್ದರೂ ನಿರ್ಲಕ್ಷ್ಯ ವಹಿಸಿದೆ. ಇದರಿಂದ, ರೈತರಿಗೆ ಸಾಕಾಣಿಕೆ ದರ ನಿಗದಿ ಇತ್ಯಾದಿ ಸಮಸ್ಯೆಗಳಿಗೆ ಸರಿಯಾದ ಪರಿಹಾರ ಸಿಗುತ್ತಿಲ್ಲ’ ಎಂದು ಹೇಳಿದರು.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.